ಸಿದ್ದಾಪುರ, ಡಿ. 20: ನೆಲ್ಲಿಹುದಿಕೇರಿಯ ಪಟ್ಟಣದಲ್ಲಿ ಇದ್ದ ಬಸ್ ತಂಗುದಾಣವನ್ನು ತೆರವುಗೊಳಿಸಿರುವ ಕ್ರಮವನ್ನು ನೆಲ್ಲಿಹುದಿಕೇರಿ ಬಿಜೆಪಿ ಸ್ಥಾನೀಯ ಸಮಿತಿ ಖಂಡಿಸುತ್ತದೆ ಎಂದು ಬಿಜೆಪಿ ಪಕ್ಷದ ಸ್ಥಳೀಯ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಸುರೇಶ್ ನೆಲ್ಲಿಕಲ್ ಮಾತನಾಡಿ, ಇತ್ತೀಚೆಗೆ ನೆಲ್ಲಿಹುದಿಕೇರಿಯ ಪಟ್ಟಣದಲ್ಲಿದ್ದ ಬಸ್ ತಂಗುದಾಣವನ್ನು ಪಂಚಾಯಿತಿಯ ಆಡಳಿತ ಮಂಡಳಿಯು ಸಾರ್ವಜನಿಕರಿಗೆ ಯಾವುದೇ ಮಾಹಿತಿಯನ್ನು ನೀಡದೆ ರಾತ್ರಿ ಸಮಯದಲ್ಲಿ ತಂಗುದಾಣವನ್ನು ತೆರವುಗೊಳಿಸಿ ನೆಲಸಮಗೊಳಿಸಿರುವುದು ಖಂಡನೀಯ ಎಂದರು.
ನೆಲ್ಲಿಹುದಿಕೇರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಟಿ.ಸಿ. ಅಶೋಕ್ ಮಾತನಾಡಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾತ್ರೋರಾತ್ರಿ ಬಸ್ ತಂಗುದಾಣವನ್ನು ನೆಲಸಮಗೊಳಿಸಿದೆ ಎಂದು ಆಕ್ಷೇಪಿಸಿದರು. ಗೋಷ್ಠಿಯಲ್ಲಿ ನೆಲ್ಲಿಹುದಿಕೇರಿ ಬಿ.ಜೆ.ಪಿ. ಸ್ಥಾನೀಯ ಸಮಿತಿಯ ಅಧ್ಯಕ್ಷ ಕೆ.ಪಿ. ಷಾಜಿ, ಯುವ ಮೋರ್ಚಾ ಅಧ್ಯಕ್ಷ ದಿಲೀಪ್ ಹಾಜರಿದ್ದರು.