ಮಡಿಕೇರಿ, ಡಿ. 20 : ಕನ್ನಡ ಸಾಹಿತ್ಯ ಪರಿಷತ್ತು, ಕಸಾಪ ಮಡಿಕೇರಿ ಘಟಕ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ 115 ನೇ ಜನ್ಮ ದಿನಾಚರಣೆ ಪ್ರಯುಕ್ತ ಕುವೆಂಪು ಅವರ ಬದುಕು ಬರಹ ಎಂಬ ಶೀರ್ಷಿಕೆಯಡಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮವು ತಾ. 21 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ನಗರದ ಡಿ.ದೇವರಾಜ ಅರಸು ಭವನದಲ್ಲಿ ನಡೆಯಲಿದೆ.

ಮಕ್ಕಳ ತಜ್ಞ ಡಾ. ಬಿ.ಸಿ. ನವೀನ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಹಿರಿಯ ಪತ್ರಕರ್ತರಾದ ಎಚ್.ಟಿ. ಅನಿಲ್, ಕ.ಸಾ.ಪ. ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್ ಇತರರು ಪಾಲ್ಗೊಳ್ಳಲಿದ್ದಾರೆ.