ಮಡಿಕೇರಿ, ಡಿ. 20: ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 23 ರಂದು ವೀರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ, ತಾ. 24 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ, ತಾ. 26 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿ ವಿತರಿಸಲಿದ್ದು, ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ, ಮಡಿಕೇರಿ 08272-220797 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.