ಮಡಿಕೇರಿ, ಡಿ. 21: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಧರ್ಮದ ಆಧಾರದಲ್ಲಿ ಭಾರತೀಯರನ್ನು ವಿಭಜಿಸುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸರಕಾರ ತೆಗೆದುಕೊಂಡಿರುವ ಹಲವು ನಿರ್ಧಾರಗಳು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದಲ್ಲಿ ಆತಂಕ ಸ್ಪಷ್ಟಿಸಿದೆ. ತ್ರಿವಳಿ ತಲಾಕ್ ಕೈಬಿಟ್ಟಿರುವುದು, ಜಮ್ಮು- ಕಾಶ್ಮೀರಕ್ಕೆ ಸಂವಿಧಾನದ ವಿಧಿ 370 ರನ್ವಯ ವಿಶೇಷ ಸ್ಥಾನಮಾನ ಕೈಬಿಟ್ಟಿರುವುದು, ಅಯೋಧ್ಯೆ ತೀರ್ಪು ಸೇರಿದಂತೆ ಪ್ರತಿಯೊಂದು ವಿಚಾರವೂ ತಮ್ಮನ್ನು ಗುರಿಯಾಗಿಟ್ಟುಕೊಂಡು ಮಾಡಲಾಗಿದೆ ಎಂಬ ಭಾವನೆ ಮುಸ್ಲಿಂರಲ್ಲಿ ಮೂಡಿದೆ ಎಂದು ದೂರಿದ್ದಾರೆ.ಅಲ್ಪಸಂಖ್ಯಾತರು ಸೇರಿದಂತೆ ಪ್ರತಿಯೊಬ್ಬ ಭಾರತೀಯರ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಬದ್ಧವಾಗಿದೆ. ಧರ್ಮದ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದನ್ನು ಕೇಂದ್ರ ಸರಕಾರ ನಿಲ್ಲಿಸಬೇಕು. ಅಭಿವೃದ್ಧಿ ಮತ್ತು ಸಮಸ್ಯೆ ಪರಿಹಾರದತ್ತ ಗಮನ ಹರಿಸಬೇಕು. ಭಾವನಾತ್ಮಕ ವಿಚಾರಗಳನ್ನು ಕೈಗೆತ್ತಿಕೊಂಡು, ವೈಮನಸ್ಸು ಮೂಡುವಂತೆ ಮಾಡಬಾರದು ಎಂದು ವೀಣಾ ಅಚ್ಚಯ್ಯ ಆಗ್ರಹಿಸಿದ್ದಾರೆ.ಸೇನೆ, ಪೆÇಲೀಸ್ ಬಳಸಿಕೊಂಡು ಜನರ ಧ್ವನಿ ಅಡಗಿಸುವ ಕೆಲಸ ಬಿಜೆಪಿ ಸರಕಾರ ಮಾಡುತ್ತಿದೆ. ಜನರ ಧ್ವನಿ ನಿರಂತರವಾಗಿ ಹತ್ತಿಕ್ಕಲು ಎಂದಿಗೂ ಸಾಧ್ಯವಾಗುವುದಿಲ್ಲ ಎಂದು ಅಭಿಪ್ರಾಯಿಸಿದ್ದಾರೆ.
ಕೇಂದ್ರ ಸರಕಾರದ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯುವುದನ್ನು ತಡೆಯಲು ನಿಷೇಧಾಜ್ಞೆ ಹೇರುವುದು ಸರಿಯಲ್ಲ. ಶಾಂತಿಯುತ ಮತ್ತು ಕಾನೂನು ಬದ್ಧ ಪ್ರತಿಭಟನೆಗೆ ಅವಕಾಶ ಮಾಡಿಕೊಡಬೇಕು. ಪ್ರತಿಭಟನೆ ನಡೆಸುವ ಸಂದರ್ಭಗಳಲ್ಲಿ ಶಾಂತಿ ಕಾಪಾಡಬೇಕು. ಸಾರ್ವಜನಿಕ ಆಸ್ತಿ, ಪಾಸ್ತಿಗೆ ಹಾನಿವುಂಟು ಮಾಡಬಾರದು. ಪೆÇಲೀಸರು ತಾಳ್ಮೆಯಿಂದ ಕರ್ತವ್ಯ ನಿರ್ವಹಿಸಬೇಕು, ಹಾಗೂ ಸಾರ್ವಜನಿಕರು ಕೂಡ ಶಾಂತಿ ಕಾಪಾಡಬೇಕೆಂದು ವೀಣಾ ಅಚ್ಚಯ್ಯ ಹೇಳಿಕೆಯಲ್ಲಿ ವಿನಂತಿಸಿಕೊಂಡಿದ್ದಾರೆ.
ಕಾಂಗ್ರೆಸ್ ಟೀಕೆ
ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತವು ತನ್ನ ಜಾತ್ಯತೀತ ನಿಲುವುಗಳಿಂದ ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ. ಇದೀಗ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರು ಹಾಗೂ ಭಾರತದಲ್ಲಿರುವ ಬಹುಸಂಖ್ಯಾತರ ಹಿತವನ್ನೂ ಬಲಿಗೊಡುತ್ತಿದೆ; ರಾಷ್ಟ್ರದ ಏಕತೆ ಮತ್ತು ಭದ್ರತೆಯ
(ಮೊದಲ ಪುಟದಿಂದ) ಹೆಸರಿನಲ್ಲಿ ಜನರ ಮೇಲೆ ಕಾನೂನು, ಕಾಯ್ದೆಗಳನ್ನು ಹೇರುತ್ತಿ ರುವುದು ಸರಿಯಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಹಿಂದು, ಮುಸ್ಲಿಂ, ಕ್ರೈಸ್ತರು ಸಹೋದರತ್ವದಲ್ಲಿ ಸಹಬಾಳ್ವೆಯನ್ನು ಈ ಹಿಂದಿನಿಂದಲೂ ನಡೆಸಿಕೊಂಡು ಬಂದಿದ್ದಾರೆ. ಇದೀಗ ಕೇಂದ್ರÀ್ರದ ಬಿಜೆಪಿ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಸಂವಿಧಾನದ ಆಶಯಗಳನ್ನು ಸಾರಾಸಗಟಾಗಿ ಬದಿಗೊತ್ತುವ ಮೂಲಕ ಮುಸ್ಲಿಂ ಸಮುದಾಯಕ್ಕೆ ಅನ್ಯಾಯ ಮಾಡಿದ್ದು, ಇದು ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಅವರು ಟೀಕಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ನೆರೆಯ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಲ್ಲಿ ದೌರ್ಜನ್ಯಕ್ಕೆ ಒಳಗಾದ ಹಿಂದು, ಸಿಖ್, ಬುದ್ಧ, ಜೈನ್ ಮತ್ತು ಪಾರ್ಸಿ ಸಮೂಹಕ್ಕೆ ಮಾತ್ರ ಪೌರತ್ವ ನೀಡುವ ಬಗ್ಗೆ ಪ್ರಸ್ತಾಪಿಸಿದೆ. ಮುಸ್ಲಿಮರನ್ನು ಕಾಯ್ದೆಯಲ್ಲಿ ಕೈಬಿಟ್ಟಿರುವುದು ಸರಿಯಾದ ಕ್ರಮವಲ್ಲ. ಧರ್ಮ ಮತ್ತು ಜಾತಿ ಆಧಾರದ ಮೇಲೆ ಯಾವುದೇ ಕಾನೂನು ರೂಪುಗೊಳ್ಳಬಾರದೆಂದು ತಿಳಿಸಿರುವ ಅವರು, ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ರಾಷ್ಟ್ರಹಿತಕ್ಕೆ ಪೌರತ್ವ ಕಾಯ್ದೆ ಪೂರಕವಲ್ಲವೆಂದು ಅಭಿಪ್ರಾಯಪಟ್ಟಿದ್ದಾರೆ.