ಮಡಿಕೇರಿ, ಡಿ. 21: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವರ್ತಕರು, ಅಂಗಡಿ ಮತ್ತು ಹೊಟೇಲ್ ಮಾಲೀಕರು ಪ್ಲಾಸ್ಟಿಕ್ ಚೀಲಗಳನ್ನು ಮಾರಾಟ ಮಾಡುವ ಬದಲಾಗಿ; ಪರಿಸರಸ್ನೇಹಿ ವಸ್ತುಗಳಾದ ಬಟ್ಟೆಯ ಕೈಚೀಲಗಳ ಬಳಕೆಯನ್ನು ಉತ್ತೇಜಿಸುವಂತೆ ಕೋರಲಾಗಿದೆ. ಅಲ್ಲದೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಶೇ. 100ರಷ್ಟು ಪ್ಲಾಸ್ಟಿಕ್ ಮುಕ್ತ ಪಂಚಾಯಿತಿಯನ್ನಾಗಿ ಮಾಡುವಲ್ಲಿ ಕೈಜೋಡಿಸಬೇಕಾಗಿ ಗ್ರಾಮ ಪಂಚಾಯಿತಿ ಪ್ರಕಟಣೆ ತಿಳಿಸಿದೆ.