ಮಡಿಕೇರಿ, ಡಿ.21: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ತಾ. 23 ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಮುಕ್ತ ವಿವಿಯ ಕಾವೇರಿ ಸಭಾಂಗಣದಲ್ಲಿ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರ ಆರಂಭಗೊಳ್ಳಲಿದೆ. 40 ದಿನಗಳ ಕಾಲ ನಡೆಯುವ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿಯು ಕೇಂದ್ರ ಸರ್ಕಾರ ನಡೆಸುವ ಆರ್‍ಆರ್‍ಬಿ, ಆರ್‍ಬಿಐ, ಎಸ್‍ಎಸ್‍ಸಿ, ಎಲ್‍ಐಸಿ, ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಅನುಕೂಲವಾಗಲಿದೆ, ಆಸಕ್ತರು ಈ ತರಬೇತಿ ಪ್ರಯೋಜನವನ್ನು ಪಡೆಯಬಹು ದಾಗಿದೆ ಎಂದು ಪ್ರಕಟಣೆ ತಿಳಿಸಿದೆ.