ಮಡಿಕೇರಿ, ಡಿ. 21: ಕೊಡಗು ಕೇಂದ್ರೀಯ ವಿದ್ಯಾಲಯದ 12ನೇ ವಾರ್ಷಿಕೋತ್ಸವ ಶಾಲಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪ್ರಾಂಶುಪಾಲ ಅರ್ಜುನ್ ಸಿಂಗ್ ಅವರು ಉದ್ಘಾಟಿಸಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶೈಕ್ಷಣಿಕ ಚಟುವಟಿಕೆ ಗಳೊಂದಿಗೆ ಸಾಂಸ್ಕøತಿಕ ಚಟುವಟಿಕೆಗಳು ಅತ್ಯವಶ್ಯಕವಾಗಿದ್ದು, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ವಾರ್ಷಿಕ ವರದಿಯನ್ನು ಪ್ರಾಂಶುಪಾಲರು ಮಂಡಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕøತಿಕ ಕಾರ್ಯಕ್ರಮ ಮನಸೂರೆಗೊಳಿಸಿತು. ಕಾರ್ಯಕ್ರಮ ದಲ್ಲಿ ಸಿಎಂಸಿ ಸಮಿತಿ ಸದಸ್ಯ ಸಿ.ವಿ. ರಾಜೇಶ್ ಇತರರು ಉಪಸ್ಥಿತರಿದ್ದರು.