ಮಡಿಕೇರಿ, ಡಿ. 21: ಚೇರಂಬಾಣೆಯಲ್ಲಿ ಶುದ್ಧ ನೀರಿನ ಘಟಕವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು ತಾಲೂಕು ಪಂಚಾಯತ್ ಅದ್ಯಕ್ಷೆ ಶೋಭಾ ಮೋಹನ್, ಬೇಂಗೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಬಿ. ಅಶೋಕ್, ಪಂಚಾಯತ್ ಸದ್ಯಸರು, ಗ್ರಾಮಸ್ಥರು ಭಾಗವಹಿಸಿದ್ದರು. ಬೇಂಗೂರು ಗ್ರಾಮದಲ್ಲಿ 10 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯನ್ನು ಕೂಡ ಉದ್ಘಾಟನೆ ಮಾಡಲಾಯಿತು ನಂತರ ಬೇಂಗೂರು ಗ್ರಾಮ ಪಂಚಾಯಿತಿಯಲ್ಲಿ ಸಭೆ ನಡೆಸಿ ಗ್ರಾಮಸ್ಥರ ಜೊತೆ ಅಭಿವೃದ್ಧಿ ವಿಚಾರವಾಗಿ ಚರ್ಚಿಸಲಾಯಿತು. ಜಿಲ್ಲಾ ಪಂಚಾಯತ್ ಉಪ ಕಾರ್ಯ ಪಾಲಕ ಅಭಿಯಂತರ ಶ್ರೀಕಂಠಯ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ರೂ.278 ಲಕ್ಷದ ಕಾಮಗಾರಿಗಳನ್ನು ಮಾಡುವ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯÀ ಬಾಚರಣಿ ಯಂಡ ಸುಮನ್ ಸ್ವಾಗತಿಸಿದರು.