ಮಡಿಕೇರಿ, ಡಿ.21 : ಪೊನ್ನಂಪೇಟೆಯ ಸಾಯಿ ಶಂಕರ್ ವಿದ್ಯಾ ಸಂಸ್ಥೆಯಲ್ಲಿ ತಾ.28 ರಂದು ಜ್ಯೋತಿ ಪ್ರದಾನ ಸಮಾರಂಭ ನಡೆಯಲಿದೆ.

ಅಂದು ಸಂಜೆ 4 ಗಂಟೆಗೆ ಸಾಯಿ ಕಲಾಮಂಚ್ ಪ್ರಶಾಂತಿ ನಿಲಯದಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷ ಝರುಗಣಪತಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ದಾನಿ ನಡಿಕೇರಿಯಂಡ ಚಿಣ್ಣಪ್ಪ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.