ಮಡಿಕೇರಿ, ಡಿ. 21: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ತಾ. 25 ರಂದು ಕ್ರೀಡಾ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸಮರ್ಪಣೆ ಮತ್ತು ಧಾರ್ಮಿಕ ಸಭೆ ಕುಶಾಲನಗರದಲ್ಲಿ ನಡೆಯಲಿದೆ ಎಂದು ಮಹಾಸಭಾದ ಅಧ್ಯಕ್ಷ ಹೆಚ್.ವಿ. ಶಿವಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. 25 ರಂದು ಬೆಳಿಗ್ಗೆ 10.30ಕ್ಕೆ ಕುಶಾಲನಗರದ ಸಹಕಾರ ಭವನದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವೀರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ವೀರಾಜಪೇಟೆ ಬಳಿಯ ಅಮ್ಮತ್ತಿಯ ಕನ್ನಡ ಮಠದ ಶ್ರೀ ಚನ್ನಬಸವದೇಶಿಕೇಂದ್ರ ಸ್ವಾಮೀಜಿ, ಶನಿವಾರಸಂತೆ ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ತೊರೆನೂರು ವಿರಕ್ತ ಮಠದ ಮಲ್ಲೇಶ್ ಸ್ವಾಮೀಜಿ, ಶನಿವಾರಸಂತೆ ಮನೆಹಳ್ಳಿ ತಪೋವನ ಕ್ಷೇತ್ರದ ಮಹಾಂತ ಶಿವಲಿಂಗ ಸ್ವಾಮೀಜಿ, ಶನಿವಾರಸಂತೆ ಶಿಡಿಗಳಲೆಮಠದ ಶ್ರೀ ಇಮ್ಮಡಿ ಶಿವಲಿಂಗಸ್ವಾಮೀಜಿ, ಕೊಡ್ಲಿಪೇಟೆ ಕಲ್ಲಳ್ಳಿಮಠ ಶ್ರೀ ರುದ್ರಮುನಿ ಸ್ವಾಮೀಜಿ, ಸೋಮವಾರಪೇಟೆ ವಿರಕ್ತ ಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ ವಹಿಸಲಿದ್ದಾರೆ ಎಂದರು.

ಕಾರ್ಯಕ್ರಮವನ್ನು ಮಾಜಿ ಸಚಿವರು ಮತ್ತು ಹಾಲಿ ಶಾಸಕ ಈಶ್ವರ ಬಿ. ಖಂಡ್ರೆ ಉದ್ಘಾಟಿಸಲಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ನಿಕಟ ಪೂರ್ವ ಸರ್ಕಾರಿ ಅಭಿಯೋಜಕರು ಹಾಗೂ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ, ಬೇಲೂರು ಶಾಸಕ ಕೆ.ಎಸ್. ಲಿಂಗೇಶ್, ಭಾರತೀಯ ಜನತಾ ಪಕ್ಷದ ರಾಜ್ಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದರು.

ಅ.ಭಾ.ವೀ. ಮಹಾಸಭಾದ ಕೇಂದ್ರ ಸಮಿತಿಯ ಉಪಧ್ಯಕ್ಷ ಸಚ್ಚಿದಾನಂದ ಮೂರ್ತಿ, ಕಾರ್ಯದರ್ಶಿ ರೇಣುಕಾ ಪ್ರಸನ್ನ, ನಟರಾಜ್ ಸಾಗರನಹಳ್ಳಿ, ಮಹಿಳಾ ಕಾರ್ಯರ್ಶಿ ರಾಜೇಶ್ವರಿ ನಾಗರಾಜು, ಮಾಹಿತಿ ಹಕ್ಕು ಆಯೋಗದ ಮಾಜಿ ಅಧ್ಯಕ್ಷ ಜೆ.ಎಸ್. ವಿರೂಪಕ್ಷಯ್ಯ, ಉತ್ತರಹಳ್ಳಿಯ ಡಾ. ಬಿ.ಎಂ. ಲತಾ, ಯುವಜನ ಮತ್ತು ಮಹಿಳಾ ಸಬಲೀಕರಣ ಇಲಾಖೆಯ ತರಬೇತುದಾರ ದೇವರಾಜಮ್ಮ ಅವರುಗಳ ಗೌರವ ಉಪಸ್ಥಿತಿ ಇರಲಿದೆಯೆಂದು ತಿಳಿಸಿದರು.

ಸನ್ಮಾನ: ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಕರ್ನಾಟಕ ಸರ್ಕಾರದ ಅಭಿಯೋಗ ನಿರ್ದೇಶಕರಾದ ಮುಳ್ಳೂರಿನ ಎಂ.ಆರ್. ದೇವಪ್ಪ, ಸಾಹಿತಿಗಳಾದ ಬೆಸೂರು ಮೋಹನ್ ಪಾಳೇಗಾರ್, ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಕೊಡಗು ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಪ್ರಾಂಶುಪಾಲ ಜಿ. ಕೆಂಚಪ್ಪ, ಕೊಡ್ಲಿಪೇಟೆಯ ಕೆ.ಎನ್. ಸಾವಿತ್ರಮ್ಮ, ವೀರಾಜಪೇಟೆಯ ಧನುಗಾಲದ ಎಸ್.ಬಿ. ವೀರಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಗುವುದೆಂದರು.

ಅಂದು ಮಧ್ಯಾಹ್ನ 2.30ಕ್ಕೆ ಕ್ರೀಡಾ ಮತ್ತು ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮಠಾಧೀಶರುಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯುವಜನ ಮತ್ತು ಮಹಿಳಾ ಸಬಲೀಕರಣ ಇಲಾಖೆಯ ತರಬೇತುದಾರರಾದ ದೇವರಾಜಮ್ಮ, ಉತ್ತರ ಹಳ್ಳಿಯ ಡಾ. ಬಿ.ಎಂ. ಲತಾ, ಅ.ಭಾ.ವೀ. ಮಹಾಸಭಾದ ಕ್ರೀಡಾ ಸಮಿತಿ ಅಧ್ಯಕ್ಷ ಎಸ್. ಮಹೇಶ್, ಅ.ಭಾ.ವೀ. ಮಹಾಸಭಾದ ಉಪಾಧ್ಯಕ್ಷರುಗಳಾದ ಎಸ್.ಎಸ್. ಸುರೇಶ್, ಮಮತ ಸತೀಶ್, ಕಾರ್ಯದರ್ಶಿ ಪಾರ್ವತಮ್ಮ ಕಾಳಿಂಗಪ್ಪ, ಕೋಶಾಧ್ಯಕ್ಷ ಹೆಚ್.ಪಿ. ಉದಯ್ ಕುಮಾರ್, ಮಾಜಿ ಮಹಿಳಾ ಅಧ್ಯಕ್ಷೆ ಉಷಾ ತೇಜಸ್ವಿ, ಅ.ಭಾ.ವೀ. ಮಹಾಸಭಾದ ವೀರಾಜಪೇಟೆ ತಾಲೂಕು ಕಾರ್ಯದರ್ಶಿ ರಾಜೇಂದ್ರ ಪ್ರಸಾದ್, ಸೋಮವಾರಪೇಟೆ ಅಕ್ಕನ ಬಳಗ ಅಧ್ಯಕ್ಷೆ ಜಲಜಾ ಶೇಖರ್, ಅ.ಭಾ.ವೀ. ಮಹಾಸಭಾದ ಸೋಮವಾರಪೇಟೆ ತಾಲೂಕು ಉಪಾಧ್ಯಕ್ಷ ವೀರೇಂದ್ರ, ಬಿ.ಎಂ. ಸರಳಾ ಬಸಪ್ಪ, ಡಿ.ಜೆ. ರಶ್ಮಿ ನವೀನ್, ಕಾರ್ಯದರ್ಶಿ ಸಿ.ಎಂ. ಪುಟ್ಟಸ್ವಾಮಿ, ಮಡಿಕೇರಿ ತಾಲೂಕು ಕಾರ್ಯದರ್ಶಿ ಜಗದೀಶ್, ತಾಲೂಕು ಘಟಕದ ನಿರ್ದೇಶಕ ಪಿ. ಮಹದೇವಪ್ಪ, ಕುಶಾಲನಗರ ಅಕ್ಕ ಬಳಗದ ಅಧ್ಯಕ್ಷೆ ಕಮಲಾ ಉದಯಕುಮಾರ್ ಭಾಗವಹಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಮಹಾಸಭಾದ ಉಪಾಧ್ಯಕ್ಷ ಜಿ.ಎಂ. ಕಾಂತರಾಜ್, ಪ್ರಧಾನ ಕಾರ್ಯದರ್ಶಿ ಟಿ.ಎಸ್. ಶಾಂಭಶಿವಮೂರ್ತಿ, ಖಜಾಂಚಿ ಉದಯ ಕುಮಾರ್ ಹಾಗೂ ಕ್ರೀಡಾ ಸಮಿತಿ ಅಧ್ಯಕ್ಷ ಎಸ್. ಮಹೇಶ್ ಉಪಸ್ಥಿತರಿದ್ದರು.