ಮಡಿಕೇರಿ, ಡಿ.21 : ಬಿಲ್ಲವ ಸೇವಾ ಸಂಘದ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ 15ನೇ ವರ್ಷದ ಜಿಲ್ಲಾ ಮಟ್ಟದ ‘’ಕೋಟಿ ಚೆನ್ನಯ್ಯ ಕ್ರೀಡಾಕೂಟ’’ ತಾ.28 ಮತ್ತು 29 ರಂದು ನಗರದ ಜ.ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.ಪತ್ರಿಕಾ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಜಿಲ್ಲಾಧ್ಯಕ್ಷೆ ಬಿ.ಎಸ್. ಲೀಲಾವತಿ, ಕ್ರೀಡಾಕೂಟದ ಪೂರ್ವಭಾವಿಯಾಗಿ ಇದೇ ಮೊದಲ ಬಾರಿಗೆ ಒಳಾಂಗಣ ಕ್ರೀಡೆಗಳಾದ ಚೆಸ್ ಮತ್ತು ಕೇರಂ ಕ್ರೀಡೆಗಳನ್ನು ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿ ಯರಿಗೆ ಹಾಗೂ ಮುಕ್ತ ವಿಭಾಗದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ತಾ. 22 ರಂದು (ಇಂದು) ನಗರದ ಫ್ರ್ರೆಂಡ್ಸ್ ಟೂರ್ಸ್ ಮತ್ತು ಟ್ರಾವೆಲ್ಸ್ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ ಯೆಂದು ತಿಳಿಸಿದರು.ಉಳಿದಂತೆ ತಾ.28 ರಿಂದ ಎರಡು ದಿನಗಳ ಕಾಲ ಟೆನಿಸ್ ಬಾಲ್ ಕ್ರಿಕೆಟ್, ಪುರುಷರು ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ ಮತ್ತು ಭಾರದ ಗುಂಡು ಎಸೆತ, ಮಹಿಳೆಯರಿಗೆ ಥ್ರೋಬಾಲ್ ಮತ್ತು ವಿಷದ ಚೆಂಡು, 5 ವರ್ಷದ ಒಳಗಿನ ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ, 1 ಮತ್ತು 2ನೇ ತರಗತಿ ಮಕ್ಕಳಿಗೆ ಕಪ್ಪೆ ಜಿಗಿತ, 3 ರಿಂದ 5ನೇ ತರಗತಿ ಮಕ್ಕಳಿಗೆ 50 ಮೀ.,5 ರಿಂದ 7ನೇ ತರಗತಿ ಮಕ್ಕಳಿಗೆ 100 ಮೀ., ಪ್ರೌಢ ಶಾಲಾ ಬಾಲಕ ಬಾಲಕಿಯರಿಗೆ 200 ಮೀ., ಪದವಿ ಪೂರ್ವ ಕಾಲೇಜು ಮಕ್ಕಳಿಗೆ 400 ಮೀ., 40 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ 100 ಮೀ., 50 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ ವೇಗದ ನಡಿಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.

(ಮೊದಲ ಪುಟದಿಂದ) ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳು ತಾ.23 ರ ಒಳಗೆ ಹೆಸರುಗಳನ್ನು ನೋಂದಾಯಿಸಬೇಕಾಗಿದ್ದು, ಹೆಚ್ಚಿನ ಮಾಹಿತಿಗೆ ಬಿಲ್ಲವ ಸಮಾಜ ಸೇವಾ ಸಂಘದ ಕಚೇರಿ, ಫ್ರೆÀ್ರಂಡ್ಸ್ ಟೂರ್ಸ್ ಅಂಡ್ ಟ್ರಾವೆಲ್ಸ್ ಕಚೆÉೀರಿ, ಕಾಲೇಜು ರಸ್ತೆ ಮಡಿಕೇರಿ ಇಲ್ಲಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.8971845965, 9448896556, 9008510556, 9481431444 ನ್ನು ಸಂಪರ್ಕಿಸಬಹುದೆಂದರು.

ಉದ್ಘಾಟನೆ: ತಾ.28 ರಂದು ಕ್ರೀಡಾ ಕೂಟದ ಕ್ರಿಕೆಟ್ ಪಂದ್ಯಾವಳಿಯನ್ನು ರಾಷ್ಟ್ರೀಯ ದೇಹದಾಡ್ರ್ಯ ಕ್ರೀಡಾ ಪಟು ಗಣೇಶ್ ಪೂಜಾರಿ ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭವನ್ನು ಬಂದರು, ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಶಾಸಕರು. ಜಿಪಂ ಅಧ್ಯಕ್ಷರು, ಕೊಡಗಿನ ವಿಧಾನ ಪರಿಷತ್ ಸದಸ್ಯರುಗಳು, ಬಿಲ್ಲವ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷರುಗಳು, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸಂಚಾಲಕ ಕೇಶವ ಬಂಗೇರ ಪುತ್ತೂರು ಸಮಾರೋಪ ಭಾಷಣ ಮಾಡಲಿದ್ದಾರೆ.

ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧÀನೆ ಮಾಡಿದ ನಾಲ್ವರನ್ನು ಸನ್ಮಾನಿಸಲಾಗುವುದೆಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ನಿಕಟ ಪೂರ್ವ ಅಧ್ಯಕ್ಷ ಬಿ.ಎಂ. ರಾಜಶೇಖರ್, ಉಪಾಧ್ಯಕ್ಷರುಗಳಾದ ಕೆ. ರವೀಂದ್ರ, ಕೆ.ಸದಾನಂದ ಬಂಗೇರ, ಕಾರ್ಯದರ್ಶಿ ಎಂ.ಕೆ. ಮನೋಹರ್, ಮದೆನಾಡು ಹೋಬಳಿ ಅಧ್ಯಕ್ಷ ಕೆ.ಎಸ್.ಆನಂದ ಉಪಸ್ಥಿತರಿದ್ದರು.