ಮಡಿಕೇರಿ, ಡಿ.21: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸ್ಟಡಿ ಸರ್ಕಲ್ ಯೋಜನೆಯ ಅಡಿಯಲ್ಲಿ ಕೇಂದ್ರ ಲೋಕಸೇವಾ ಆಯೋಗ ನಡೆಸಲಿರುವ ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆಗೆ ಉಚಿತ ತರಬೇತಿಯು ಜನವರಿ 3 ರಿಂದ ಜನವರಿ 15 ರ ವರೆಗೆ ನಗರದಲ್ಲಿ ನಡೆಯಲಿದೆ. ಪರೀಕ್ಷಾ ಪೂರ್ವ ತರಬೇತಿಯು ಪ್ರತಿದಿನ ಮಧ್ಯಾಹ್ನ 4 ರಿಂದ ಸಂಜೆ 7 ರವರೆಗೆ ಹಾಗೂ ರಜಾ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.

ಪರೀಕ್ಷಾ ಪೂರ್ವ ತರಬೇತಿಯಲ್ಲಿ ಕೇಂದ್ರ ಲೋಕಸೇವಾ ಆಯೋಗ ನಿಗದಿಪಡಿಸಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ತರಬೇತಿ ನೀಡಲಾಗುವುದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಅಥವಾ ಅಂಚೆ ಕಾರ್ಡಿನ ಮುಖಾಂತರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸುವಂತೆ ಉದ್ಯೋಗಾಧಿಕಾರಿ ಸಿ.ಜಗನ್ನಾಥ್ ತಿಳಿಸಿದ್ದಾರೆ.