ಮಡಿಕೇರಿ, ಡಿ. 21: ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ವಿಶೇಷ ಶಿಬಿರವು ಬೋಯಿಕೇರಿ ಇಬ್ನಿವಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್ ಇತರರು ಪಾಲ್ಗೊಂಡಿದ್ದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಶಿಬಿರದ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಸಾಮಾಜಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತೊಡಗಿಸಿ ಕೊಳ್ಳುವಂತಾಗಬೇಕು ಎಂದು ಅವರು ಕರೆ ನೀಡಿದರು. ಸಮಾಜದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಪ್ರಮುಖವಾಗಿದ್ದು, ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ರಾಷ್ಟ್ರದ ಉನ್ನತ್ತಿ ಸಾಧ್ಯ ಎಂದರು.