ಮಡಿಕೇರಿ, ಡಿ. 21: ಕೊಡವ ನ್ಯಾಷನಲ್ ಕೌನ್ಸಿಲ್ (ಸಿ.ಎನ್.ಸಿ.) ಸಂಘಟನೆ ವತಿಯಿಂದ ಸಂಘಟನೆಯ ಅಧ್ಯಕ್ಷ ಎನ್.ಯು. ನಾಚಪ್ಪ ಅವರ ನೇತೃತ್ವದಲ್ಲಿ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರನ್ನು ಭೇಟಿಯಾಗಿ ಬೇಡಿಕೆಗಳ ಬಗ್ಗೆ ಚರ್ಚಿಸಲಾಯಿತು. ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನಮಾನ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಪುಳ್ಳಂಗಡ ನಟೇಶ್, ಪುಲ್ಲೆರ ಕಾಳಪ್ಪ, ಕಾಂಡೆರ ಸುರೇಶ್, ಬಿಜೆಪಿಯ ಮಾಚಿಮಾಡ ಗಪ್ಪಣ್ಣ, ಮೈಸೂರಿನ ಕಾರ್ಪೋರೇಟರ್ ಮಾಳೇಟಿರ ಸುಬ್ಬಯ್ಯ, ಬಿಜೆಪಿ ನಗರ ಕಾರ್ಯದರ್ಶಿ ರಾಜೇಂದ್ರ, ರಾಜ್ಯ ಕಾರ್ಯದರ್ಶಿ ರವಿಶಂಕರ್ ಮತ್ತಿತರರು ಹಾಜರಿದ್ದರು.