ಮಡಿಕೇರಿ, ಡಿ.23: ವೀರಾಜಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ‘ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ’ ಎಂಬ ಶೀರ್ಷಿಕೆಯಡಿ ತಾ.24 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಕೋತೂರು ಗ್ರಾಮದ ಶ್ರೀ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.