ಸುಂಟಿಕೊಪ್ಪ, ಡಿ.23: ಇಲ್ಲಿಗೆ ಸಮೀಪದ ಟಾಟಾ ಕಾಫಿ ಸಂಸ್ಥೆಯ ಅಂಗ ಸಂಸ್ಥೆಯಾದÀ ಕೂರ್ಗ್ ಫೌಂಡೇಷನ್ ಸಂಸ್ಥೆಯು ಸ್ವಸ್ಥ ಶಾಲೆಯ ಸಮುದಾಯ ಆಧಾರಿತ ಪುನರ್ವಸತಿ ಕಾರ್ಯಕ್ರಮದಡಿ ವೀರಾಜಪೇಟೆಯ ಕೊಡಗು ದಂತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹಭಾಗಿತ್ವದಲ್ಲಿ ಸ್ವಸ್ಥ ಶಾಲೆಯ ವಿಶೇಷ ಚೇತನ ಮಕ್ಕಳು ಹಾಗೂ ಅವರ ಪೋಷಕರಿಗೆ ಉಚಿತ ದಂತ ತಪಾಸಣೆ ನಡೆಸಲಾಯಿತು.
ಶಿಬಿರದಲ್ಲಿ ದಂತ ವೈದ್ಯರಾದ ಡಾ.ಮಾಳವಿಕ ಗಣಪತಿ ಹಾಗೂ ತಂಡ ತಪಾಸಣೆ ನಡೆಸಿತು. ಶಿಬಿರದಲ್ಲಿ ಸ್ವಸ್ಥ ಸಂಸ್ಥೆಯ ನಿರ್ದೇಶಕರಾದ ಆರತಿ ಸೋಮಯ್ಯ, ಸ್ವಸ್ಥ ಶಾಲೆಯ ಸಿಬ್ಬಂದಿ ಆಸ್ಪತ್ರೆಯ ವೈದ್ಯರುಗಳು, ಹಾಗೂ ದಂತ ವೈದ್ಯ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.