ಮಡಿಕೇರಿ, ಡಿ. 23: ದೆಹಲಿಯಲ್ಲಿ ಮಂಗಳವಾರ ಕೇಂದ್ರ ವಾಣಿಜ್ಯ ಮತ್ತು ಹಣಕಾಸು ಸಚಿವರನ್ನು ಕರ್ನಾಟಕದ ವಿವಿಧ ಬೆಳೆಗಾರ ಸಂಘಟನೆಗಳ ನಿಯೋಗವು ಭೇಟಿ ಮಾಡಿ ಕಾಫಿ ಉದ್ಯಮಕ್ಕೆ ಸಂಬಂಧಿಸಿದಂತೆ ವಿವಿಧ ಸಮಸ್ಯೆಗಳ ಪರಿಹಾರದ ಬಗ್ಗೆ ಚರ್ಚಿಸಲಿದೆ.

ಕೇಂದ್ರ ಸಚಿವ ಸದಾನಂದ ಗೌಡ ಅವರನ್ನು ತಾ. 20 ರಂದು ಕರ್ನಾಟಕ ಬೆಳೆಗಾರರ ಒಕ್ಕೂಟ, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಮತ್ತು ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್‍ನ ಪದಾಧಿಕಾರಿಗಳ ನಿಯೋಗವು ಬೆಂಗಳೂರಿನಲ್ಲಿ ಭೇಟಿ ಮಾಡಿ ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು, ಕೇಂದ್ರ ವಾಣಿಜ್ಯ ಸಚಿವರು ಹಾಗೂ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಲು ನಿಯೋಗವನ್ನು ಕೆರದೊಯ್ಯುವಂತೆ ಮನವಿ ಮಾಡಲಾಗಿತ್ತು.

ಅಂತೆಯೇ ತಾ. 24 ರಂದು (ಇಂದು) ಕರ್ನಾಟಕ ಬೆಳೆಗಾರರ ಒಕ್ಕೂಟ, ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್ ಪದಾಧಿಕಾರಿಗಳ ತಂಡವನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರು ಮತ್ತು ಕೇಂದ್ರ ವಾಣಿಜ್ಯ ಸಚಿವರನ್ನು ಭೇಟಿ ಮಾಡಿ ಸಮಸ್ಯೆಗಳ ಬಗ್ಗೆ ಚರ್ಚೆಗೆ ಸಮಯ ನಿಗಧಿಗೊಳಿಸಲಾಗಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ. ತೀರ್ಥಮಲ್ಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.