ಗೋಣಿಕೊಪ್ಪಲು, ಡಿ.23 : ವೀರಾಜಪೇಟೆ ಪೊಲೀಸ್ ಉಪವಿಭಾಗ ವತಿಯಿಂದ ಗೋಣಿಕೊಪ್ಪ ಕಾವೇರಿ ಕಾಲೇಜು ಸಭಾಂಗಣದಲ್ಲಿ ಜನಸ್ನೇಹಿ ಪೊಲೀಸ್ ಕಾರ್ಯಾಗಾರವು ನಡೆಯಿತು. ವೀರಾಜಪೇಟೆ ಉಪ ಅಧೀಕ್ಷಕ ಸಿ.ಟಿ. ಜಯಕುಮಾರ್‍ರವರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆ ಉಪ ವಿಭಾಗ, ಗ್ರಾಮಾಂತರ, ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟ ಠಾಣೆಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಗಾರದ ಪ್ರಯೋಜನ ಪಡೆದರು. ಈ ಸಂದರ್ಭ ಗೋಣಿಕೊಪ್ಪ ವೃತ್ತ ನಿರೀಕ್ಷಕರಾದ ರಾಮರೆಡ್ಡಿ, ಠಾಣಾಧಿಕಾರಿ ಸುರೇಶ್ ಬೋಪಣ,್ಣ ಕುಟ್ಟ ವೃತ್ತ ನಿರೀಕ್ಷಕ ಪರಶಿವಮೂರ್ತಿ, ಸಹಿತ ವಿವಿಧ ಠಾಣೆಗಳ ಠಾಣಾಧಿಕಾರಿಗಳು ಭಾಗವಹಿಸಿದ್ದರು.