ಶನಿವಾರಸಂತೆ, ಡಿ. 22: ಪಟ್ಟಣದ ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಎಸ್.ಎ. ಸಿಂಚನಾ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಪ್ಲೋರ್‍ಬಾಲ್ ಟೂರ್ನಿಯಲ್ಲಿ ಭಾಗವಹಿಸಿದ್ದು, ಜನವರಿಯಲ್ಲಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪ್ಲೋರ್‍ಬಾಲ್ ಟೂರ್ನಿಗೆ ಆಯ್ಕೆಯಾಗಿದ್ದಾಳೆ. ಈಕೆ ಭಾರತಿ ವಿದ್ಯಾಸಂಸ್ಥೆ ಪಿ.ಯು. ಕಾಲೇಜಿನ ಪ್ರಾಂಶುಪಾಲ ಎಸ್.ಜೆ. ಅಶೋಕ್ ಅವರ ಪುತ್ರಿ.