ಕೂಡಿಗೆ,ಡಿ. 23: ಕೂಡಿಗೆಯ ಸೈನಿಕ ಶಾಲೆಯಲ್ಲಿ ಶ್ರೀನಿವಾಸ ರಾಮಾನುಜಮ್ ಸ್ಮರಣಾರ್ಥ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸೀಮಾ ತ್ರಿಪಾಟಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ಕೆಡೆಟ್ ವಿನಯ್ ಅವರು, ಭಾರತದ ಪ್ರಖ್ಯಾತ ಗಣಿತಜ್ಞ ಶ್ರೀನಿವಾಸ ರಾಮಾನುಜಮ್ ಅವರ ಜೀವನ ಚರಿತ್ರೆ ವಿವರಿಸಿದರು.
ನಂತರ ಶಾಲಾ ವಿದ್ಯಾರ್ಥಿಗಳು ಗಣಿತ ವಿಷಯವನ್ನು ಸುಲಭವಾಗಿ ಕಲಿಯುವ ಬಗ್ಗೆ ನಾಟಕವನ್ನು ಪ್ರದರ್ಶಿಸಿದರು. ಗಣಿತ ಶಾಸ್ತ್ರವನ್ನಾಧರಿಸಿ ವಿದ್ಯಾರ್ಥಿಗಳಿಗೆ ಸ್ಪರ್ಧೆಯನ್ನು ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಆಡಳಿತಾಧಿಕಾರಿ ಸ್ಕ್ವಾಡ್ರನ್ ಲೀಡರ್, ಸೂರ್ಯನಾರಾಯಣ್ ಹಾಗೂ ಭೋದಕ ಹಾಗೂ ಭೋದಕೇತರ ವರ್ಗ, ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು.