ವೀರಾಜಪೇಟೆ, ಡಿ. 23: ವೀರಾಜಪೇಟೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ಇಲ್ಲಿನ ತಾಲೂಕು ಕಚೇರಿಯ ಕಂದಾಯ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧದ ದೂರುಗಳನ್ನು ಸ್ವೀಕರಿಸಿದರು. ಸಣ್ಣಪುಟ್ಟ ದೂರುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು.

ಇದೇ ಸಂದರ್ಭ ಮಾತನಾಡಿದ ಇಲಾಖೆಯ ವೃತ್ತ ನಿರೀಕ್ಷಕ ಸುಬ್ರಮಣಿ, ಇಲಾಖೆಯ ಅಧಿಕಾರಿಗಳು ಪ್ರತಿ ತಿಂಗಳು ವೀರಾಜಪೇಟೆಯ ತಾಲೂಕು ಕಚೇರಿಯಲ್ಲಿ ನಿಗದಿತ ದಿನಾಂಕದಲ್ಲಿ ಶಿಬಿರ ಹೂಡಲಿರುವರು. ಈ ಸಮಯದಲ್ಲಿ ಸಾರ್ವಜನಿಕರಿಂದ ಮುಕ್ತವಾಗಿ ದೂರುಗಳನ್ನು ಸ್ವೀಕರಿಸಲಾಗುವುದು ಎಂದರು.

ಲೋಕಾಯುಕ್ತ ಸಿಬ್ಬಂದಿಗಳಾದ ಕರ್ತಮಯ್ಯ, ಲೋಕೇಶ್ ಹಾಗೂ ಮಂಜುನಾಥ್ ಹಾಜರಿದ್ದರು.