ಸೋಮವಾರಪೇಟೆ,ಡಿ.23: ವಿದ್ಯಾರ್ಥಿಗಳಲ್ಲಿ ಪ್ರಾಥಮಿಕ ಹಂತದಲ್ಲಿಯೇ ವೈಜ್ಞಾನಿಕವಾಗಿ ಚಿಂತಿಸುವ ಮನೋಭಾವನೆಯನ್ನು ಬೆಳೆಸಬೇಕು ಎಂದು ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಸಂಚಾಲಕ ಬಿ.ಎಸ್.ಸದಾನಂದ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ರೋಟರಿ ಹಿಲ್ಸ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ವತಿಯಿಂದ ಚನ್ನಬಸಪ್ಪ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಅಧ್ಯಕ್ಷ ಡಿ.ಪಿ.ರಮೇಶ್ ಮಾತನಾಡಿ, ರೋಟರಿ ಸಂಸ್ಥೆಯ ಮೂಲಕ ವಿಜ್ಞಾನವು ಮಕ್ಕಳ ಮನೆ ಬಾಗಿಲಿಗೆ ತಲುಪುತ್ತಿದೆ.

ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ಲೋಕೇಶ್, ಜೂನಿಯರ್ ಕಾಲೇಜಿನ ಉಪಪ್ರಾಂಶುಪಾಲ ಹನುಮಂತಪ್ಪ ತಳವಾರ್, ರಾಜ್ಯ ವಿಜ್ಞಾನ ಪರಿಷತ್ ಸಂಚಾಲಕ ಟಿ.ಜಿ.ಪ್ರೇಮ ಕುಮಾರ್, ಯೂತ್ ಮೂವ್‍ಮೆಂಟ್‍ನ ಸಂಚಾಲಕ ಮಂಜುನಾಥ್ ಉಪಸ್ಥಿತರಿದ್ದರು.