ಮಡಿಕೇರಿ, ಡಿ.22 : ವೀರಾಜಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ‘ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ’ ಎಂಬ ಶೀರ್ಷಿಕೆಯಡಿ ತಾ. 24 ರಂದು ಬೆಳಗ್ಗೆ 11 ಗಂಟೆಗೆ ಕೋತೂರು ಗ್ರಾಮದ ಶ್ರೀ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೃಷಿ ವಸ್ತು ಪ್ರದರ್ಶನ ಮತ್ತು ರೈತ ಸಂವಾದ ನಡೆಯಲಿದೆ ಎಂದು ವೀರಾಜಪೇಟೆ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.