ಶನಿವಾರಸಂತೆ, ಡಿ. 22: ಪಟ್ಟಣದ ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿ.ಯು. ಕಾಲೇಜಿನ ವಾರ್ಷಿಕೋತ್ಸವ ತಾ. 23 ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಮೈಸೂರಿನ ಸೆಂಟ್ ಥೋಮಸ್ ವಿದ್ಯಾಸಂಸ್ಥೆ ಅಧ್ಯಕ್ಷ ಡಾ. ಕೆ.ಜೆ. ವರ್ಗೀಸ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯದರ್ಶಿ ಫಾ. ಜೋಸೆಫ್ ಫಿಲಿಪ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಪಾಲ್ಗೊಳ್ಳಲಿದ್ದಾರೆ.
ಹಾಸ್ಯ ಕಲಾವಿದ ಪ್ರೊ. ಎಂ. ಕೃಷ್ಣೇಗೌಡ ಸಮಾರೋಪ ಭಾಷಣ ಮಾಡಲಿದ್ದು, ಅತಿಥಿಗಳಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಕೆ.ಎಂ. ಭವಾನಿ, ಕ್ಷೇತ್ರ ಶಿಕ್ಷಣಾಧಿಕಾರಿ, ಸಂಪನ್ಮೂಲ ವ್ಯಕ್ತಿ ಜಾನ್‍ಪಾಲ್ ಡಿಸೋಜ ಇತರರು ಪಾಲ್ಗೊಳ್ಳುವರು.