ಪಾಲಿಬೆಟ್ಟ, ಡಿ. 25 : ಕಳೆದ ಹಲವು ವರ್ಷಗಳಿಂದ ಪಾಲಿಬೆಟ್ಟದಲ್ಲಿ ಇರುವ ವಿದ್ಯಾರ್ಥಿನಿಲಯಕ್ಕೆ ಸೂಕ್ತ ಕಟ್ಟಡವಿಲ್ಲದೇ ಸಮಸ್ಯೆಗಳನ್ನು ಎದುರಿಸುತ್ತಿದ್ದ ವಿದ್ಯಾರ್ಥಿಗಳಿಗೆ ಇನ್ನೂ ಒಂದು ತಿಂಗಳಲ್ಲಿ ನೂತನ ಕಟ್ಟಡ ಸೌಲಭ್ಯ ಸಿಗಲಿದೆ.

ಅಂದಾಜು ರೂ. 2.80 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಕೆ.ಜಿ ಬೋಪಯ್ಯ ಚಾಲನೆ ನೀಡಿದರು.

ನಂತರ ಮಾತನಾಡಿ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸೌಲಭ್ಯಗಳನ್ನು ಪಡೆದುಕೊಂಡು ಪ್ರತಿಭಾನ್ವಿತರಾಗಿ ಸಾಧಿಸುವ ಛಲದೊಂದಿಗೆ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಕರೆ ನೀಡಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಇತರ ವಿದ್ಯಾರ್ಥಿ ಗಳಿಗೂ ಹಾಸ್ಟೆಲ್‍ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಪೋಷಕರು ಮಕ್ಕಳನ್ನು ಶಿಕ್ಷಣದ ಮೂಲಕ ಮುಂದೆ ತರುವ ಪ್ರಯತ್ನಕ್ಕೆ ಕೈ ಜೋಡಿಸಬೇಕೆಂದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ, ತಾಲೂಕು ಪಂಚಾಯಿತಿ ಸದಸ್ಯ ಕುಟ್ಟಂಡ ಅಜಿತ್ ಕರುಂಬಯ್ಯ, ರಾಜ್ಯ ವಸತಿ ಶಿಕ್ಷಣ ಸಂಘದ ರವೀಂದ್ರ, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್, ತಾಲೂಕು ಪರಿಶಿಷ್ಟ ವರ್ಗಗಳ ಇಲಾಖೆಯ ಅಧಿಕಾರಿ ಗುರುಶಾಂತಪ್ಪ, ನಿಲಯಪಾಲಕ ಸಿದ್ಧಲಿಂಗ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ಕುಟ್ಟಂಡ ದೀಪಕ್ ಗಣಪತಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಟ್ಟಂಡ ವಸಂತ್, ಸ್ಥಳೀಯರಾದ ನಿಖಿಲ್ ಮುದ್ದಪ್ಪ, ನವೀನ್ ಈಶ್ವರ್, ವಿಜೇಶ್ ಸೇರಿದಂತೆ ಮತ್ತಿತರರು ಇದ್ದರು. ವರದಿ : ಪುತ್ತಮ್ ಪ್ರದೀಪ್