ವೀರಾಜಪೇಟೆ, ಡಿ. 25: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕಮ್ಯೂನಿಸ್ಟ್ ಪಕ್ಷದ ಕೇಂದ್ರ ಕಚೇರಿ ಕಟ್ಟಡ ಹಾಗೂ ಎರಡು ಬೈಕ್‍ಗಳಿಗೆ ನಿನ್ನೆ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಹಾನಿಗೊಳಿಸಿರುವುದಕ್ಕೆ ಕೊಡಗು ಜಿಲ್ಲಾ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಖಂಡಿಸಿದ್ದು, ಪೊಲೀಸರು ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ತಕ್ಷಣ ಬಂಧಿಸುವಂತೆ ಪಕ್ಷದ ಜಿಲ್ಲಾ ಕಾರ್ಯದರ್ಶಿ ಹಾಗೂ ರಾಜ್ಯ ಸಮಿತಿ ಸದಸ್ಯ ಕೆ.ವಿ. ಸುನಿಲ್ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧೆಡೆಗಳಲ್ಲಿ ಕಳೆದ ಹತ್ತು ದಿನಗಳಿಂದ ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ಕಾಯಿದೆ ವಿರುದ್ಧ ತೀವ್ರ ರೀತಿಯ ಪ್ರತಿಭಟನೆ ನಡೆಯುತ್ತಿದ್ದು, ಎಡ ಪಕ್ಷಗಳು ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಪಕ್ಷವು ಹೋರಾಟದ ಮುಂಚೂಣಿ ಯಲ್ಲಿದ್ದು ಕೋಮುವಾದಿಗಳಿಗೆ ಸಹಕರಿಸದಿರುವುದರಿಂದ ಈ ದುಷ್ಕøತ್ಯ ಎಸಗಲಾಗಿದೆ ಎಂದು ಆರೋಪಿಸಿ ದ್ದಾರೆ. ಈ ಕೃತ್ಯವನ್ನು ಕೂಲಂಕುಷವಾಗಿ ತನಿಖೆ ನಡೆಸಿ ತಕ್ಷಣ ಕ್ರಮಕೈಗೊಳ್ಳಬೇಕೆಂದು ಪಕ್ಷ ಆಗ್ರಹಿಸಿರುವುದಾಗಿ ತಿಳಿಸಿದ್ದಾರೆ.

ಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಖಜಾಂಚಿ ವಿ.ಆರ್. ರಜನಿಕಾಂತ್, ಸಹಕಾರ್ಯದರ್ಶಿ ಮಾಯಮುಡಿ ರಮೇಶ್ ಹಾಜರಿದ್ದರು.