ಶನಿವಾರಸಂತೆ, ಡಿ. 25: ಸಮೀಪದ ಹಂಡ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ವಿಕ್ರಾಂತ್ ಕೆಲ್ಕರ್ ಅವರು ಕೇಂದ್ರ ಸರ್ಕಾರ ಮಾನವ ಸಂಪನ್ಮೂಲ ಸಚಿವಾಲಯದ ವತಿಯಿಂದ ನೀಡಲಾಗುವ ರಾಷ್ಟ್ರೀಯ ಐಸಿಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನವದೆಹಲಿಯಲ್ಲಿ ಡಾ.ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಜರುಗಿದ ಸಮಾರಂಭದಲ್ಲಿ ಅವರು ಪ್ರಶಸ್ತಿಯನ್ನು ಮಾನವ ಸಂಪನ್ಮೂಲ ಸಚಿವರಿಂದ ಸ್ವೀಕರಿಸಿದರು. ಶಾಲೆಗಳಲ್ಲಿ ಅತ್ಯುತ್ತಮವಾಗಿ ತಂತ್ರಜ್ಞಾನ ಬಳಸಿ ಬೋಧನೆ ಮಾಡುವ ಶಿಕ್ಷಕರಿಗೆ ಇದನ್ನು ಭಾರತ ಸರ್ಕಾರ ಮಾನವ ಸಂಪನ್ಮೂಲ ಸಚಿವಾಲಯದಿಂದ ನೀಡಲಾಗುತ್ತದೆ.