ಮಡಿಕೇರಿ, ಡಿ. 25: ಕರ್ನಾಟಕ ಸರ್ಕಾರ, ಸಮಾಜ ಕಲ್ಯಾಣ ಇಲಾಖೆ, ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರಾದ ಚಂದ್ರಶೇಖರ ರೆಡ್ಡಿ ಬಾಜನರಾಗಿದ್ದಾರೆ.
ಬೆಂಗಳೂರಿನ ದೇವರಾಜ ಅರಸು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಮತ್ತು ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.