ಕಡಗದಾಳು, ಡಿ. 25: ಕಡಗದಾಳು ಗ್ರಾಮ ಪಂಚಾಯಿತಿ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಕಾರ್ಯ ನಡೆದಿದೆ. ಇದರ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾದೇಟಿರ ತಿಮ್ಮಯ್ಯ ನೆರವೇರಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ ಗ್ರಾಮಸ್ಥರಾದ ವಾಸು ಶಂಭಯ್ಯ, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಹಾಜರಿದ್ದರು.