ಪೊನ್ನಂಪೇಟೆ, ಡಿ.24: ಹುದಿಕೇರಿಯ ಲಿಟಲ್ ಪ್ಲವರ್ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ ತಾ. 28 ರಂದು ನಡೆಯಲಿದ್ದು, ಮಧ್ಯಾಹ್ನ 1.30ಕ್ಕೆ ಪ್ರಾರಂಭಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷರಾದ ಬೋಧಸ್ವರೂಪಾನಂದಾಜಿ, ಅಂತರಾಷ್ಟ್ರೀಯ ಕ್ರೀಡಾಪಟು ತೀತಮಾಡ ಅರ್ಜುನ್ ದೇವಯ್ಯ, ವೀರಾಜಪೇಟೆ ತಾ.ಪಂ. ಸದಸ್ಯ ನೆಲ್ಲಿರ ಚಲನ್, ಹುದಿಕೇರಿ ಗ್ರಾ.ಪಂ. ಸದಸ್ಯೆ ಕಳ್ಳೇಂಗಡ ಸುಧಾ ರಮೇಶ್ ತಾಲೂಕು ಕೊಡವ ಎಳ್ತ್‍ಕಾರಡ ಕೂಟದ ಅಧ್ಯಕ್ಷ ಚಟ್ಟಂಗಡ ರವಿ ಸುಬ್ಬಯ್ಯ, ಚೆಯ್ಯಂಡಾಣೆ ಕೊಡಗು ಎಜುಕೇಷನಲ್ ಅಂಡ್ ಸೋಶಿಯಲ್ ಸರ್ವಿಸ್ ಟ್ರಸ್ಟ್‍ನ ಕಾರ್ಯದರ್ಶಿ ಮರ್ಚಂಡ ಗಣೇಶ್ ಪೊನ್ನಪ್ಪ, ಹುದಿಕೇರಿ ಲಿಟಲ್ ಪ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸತೀಶ್ ಸುವರ್ಣ ಮುಂತಾದವರು ಭಾಗವಹಿಸಲಿದ್ದಾರೆ. ಸಂಜೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.