ಸೋಮವಾರಪೇಟೆ, ಡಿ. 25: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವೀಶ್ ಅವರನ್ನು ಕಲ್ಕಂದೂರು ಗ್ರಾಮದ ಜನಶಕ್ತಿ ವೇದಿಕೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಶಕ್ತಿ ಸಂಘದ ಅಧ್ಯಕ್ಷ ರವೀಶ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು, ಪಿಡಿಓ ರವೀಶ್ ಅವರನ್ನು ಅಭಿನಂದಿಸಿ ಬೀಳ್ಕೊಟ್ಟರು.

ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ರೇಣುಕಾ ವೆಂಕಟೇಶ್, ಉಪಾಧ್ಯಕ್ಷ ಮಿಥುನ್, ಸದಸ್ಯೆ ವನಜಾಕ್ಷಿ, ಲೆಕ್ಕಪರಿಶೋಧಕ ಬಿಪಿನ್ ಸೋಮಯ್ಯ, ಕರವೇ ನಗರಾಧ್ಯಕ್ಷ ಮಂಜುನಾಥ್, ಪಿಡಿಓ ಅಸ್ಮಾ, ಜನಶಕ್ತಿ ವೇದಿಕೆಯ ಪದಾಧಿಕಾರಿಗಳಾದ ಅಬ್ದುಲ್ ಸಲಾಮ್, ಮಹಮ್ಮದ್, ರಮೇಶ್, ಪುತ್ತು, ಹಸೈನಾರ್, ಸಮದ್, ನಿಜಾಮಿ, ಇಬ್ರಾಹಿಂ, ಬಾಪುಟ್ಟಿ, ಬಾಲನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.