ಮಡಿಕೇರಿ, ಡಿ. 25: ಪೌರತ್ವ ಕಾಯ್ದೆ ತಿದ್ದುಪಡಿ ಮಸೂದೆ ವಿರುದ್ಧ ತಾ. 30 ರಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ನಡೆಯುವ ಪ್ರತಿಭಟನೆಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಸಂಪೂರ್ಣ ಬೆಂಬಲ ನೀಡಲಿದ್ದು, ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.