ಕುಶಾಲನಗರ, ಡಿ. 25: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ನಡೆಸಿದಲ್ಲಿ ಮಾತ್ರ ಇತರರೊಡನೆ ಪೈಪೋಟಿ ನೀಡುವುದರೊಂದಿಗೆ ಯಶಸ್ಸು ಗಳಿಸಲು ಸಾಧ್ಯ ಎಂದು ರಾಜ್ಯ ಸರಕಾರದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಸ್ಥಳೀಯ ರೈತ ಸಹಕಾರ ಭವನದಲ್ಲಿ ನಡೆದ ಕ್ರೀಡಾ ಮತ್ತು ಪ್ರತಿಭಾ ಪುರಸ್ಕಾರ-2019, ಗೌರವ ಸಮರ್ಪಣೆ ಮತ್ತು ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಪ್ರತಿಭಾವಂತ ಕುಶಾಲನಗರ, ಡಿ. 25: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ನಡೆಸಿದಲ್ಲಿ ಮಾತ್ರ ಇತರರೊಡನೆ ಪೈಪೋಟಿ ನೀಡುವುದರೊಂದಿಗೆ ಯಶಸ್ಸು ಗಳಿಸಲು ಸಾಧ್ಯ ಎಂದು ರಾಜ್ಯ ಸರಕಾರದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಘಟಕದ ಆಶ್ರಯದಲ್ಲಿ ಸ್ಥಳೀಯ ರೈತ ಸಹಕಾರ ಭವನದಲ್ಲಿ ನಡೆದ ಕ್ರೀಡಾ ಮತ್ತು ಪ್ರತಿಭಾ ಪುರಸ್ಕಾರ-2019, ಗೌರವ ಸಮರ್ಪಣೆ ಮತ್ತು ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಪ್ರತಿಭಾವಂತ ಶಿಕ್ಷಣ ಒದಗಿಸಲು ಚಿಂತನೆ ಹರಿಸಬೇಕಿದೆ. ಅವರಲ್ಲಿನ ಕೊರತೆಗಳನ್ನು ಎತ್ತಿ ಹಿಡಿಯದೆ ಸಕಾರಾತ್ಮಕ ಗುಣಗಳನ್ನು ಬೆಂಬಲಿಸಿ ಪ್ರೋತ್ಸಾಹಿಸಿದಲ್ಲಿ ಅವರನ್ನು ಯಶಸ್ಸಿನ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದರು.ಎಲ್ಲಾ ವರ್ಗದಲ್ಲಿಯೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ವೀರಶೈವ ಸಮಾಜ ವಿದ್ಯಾರ್ಥಿಗಳು ಕೂಡ ಪ್ರಾಥಮಿಕ, ಪ್ರೌಢಶಿಕ್ಷಣದಲ್ಲಿ ಅತ್ಯುತ್ತಮ ಸಾಧನೆ ತೋರುತ್ತಿದ್ದಾರೆ. ವೈದ್ಯಕೀಯ ಶಿಕ್ಷಣದಂತಹ ಉನ್ನತ ವ್ಯಾಸಂಗದ ಪ್ರಶ್ನೆ ಬಂದಾಗ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿಯ ಕೊರತೆಯಿಂದಾಗಿ ಅರ್ಹತಾ ಪರೀಕ್ಷೆ ಮತ್ತಿತರ ವಿಚಾರಗಳಲ್ಲಿ ಹಿನ್ನೆಡೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಭಾಗದಲ್ಲಿ ಮೀಸಲಾತಿಯ ಅಗತ್ಯತೆಯಿದೆ ಎಂದು ಅವರು ಆಗ್ರಹ ವ್ಯಕ್ತಪಡಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವ, (ಮೊದಲ ಪುಟದಿಂದ) ಹಾಲಿ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಬಿ ಖಂಡ್ರೆ ಮಾತನಾಡಿ, ರಾಜ್ಯದ ಪ್ರತಿ ಜಿಲ್ಲೆ ಸೇರಿದಂತೆ ಇತರ ರಾಜ್ಯಗಳಲ್ಲಿ ಕೂಡ ಮಹಾಸಭಾದ ಮೂಲಕ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ. ವರ್ಷವೊಂದಕ್ಕೆ 3 ರಿಂದ 4 ಸಾವಿರ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಮಹಾಸಭಾ 65-70 ಲಕ್ಷ ಹಣ ಇದಕ್ಕಾಗಿ ವಿನಿಯೋಗಿಸುತ್ತಿದೆ ಎಂದರು.

ಇಂದಿನ ಯುವಪೀಳಿಗೆಗೆ ಸಮುದಾಯದ ಆಚಾರ ವಿಚಾರ, ಸಂಸ್ಕøತಿಯ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ. ಸ್ವಾತಂತ್ರ್ಯ ಪೂರ್ವದಲ್ಲಿ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಟ ಮಾಡಿದ ಸಮುದಾಯದ ಮಹಾನ್ ದಾರ್ಶನಿಕರ ತತ್ವ, ಸಿದ್ಧಾಂತ, ವೈಚಾರಿಕತೆಯ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಪಾಶ್ಚಿಮಾತ್ಯ ಸಂಸ್ಕøತಿಗಳಿಗೆ ಮಾರುಹೋಗಿ ಅಡ್ಡದಾರಿ ಹಿಡಿಯುತ್ತಿರುವವರನ್ನು ವಚನ ಸಾಹಿತ್ಯದ ತಿರುಳುಗಳನ್ನು ಮನನ ಮಾಡಿಸುವ ಮೂಲಕ ಅವರಲ್ಲಿ ಬದಲಾವಣೆ ತರುವಂತಾಗಬೇಕು. ರಾಜ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಮ್ಮ ಸಮುದಾಯದ ರಾಜ ಮನೆತನ, ಹೋರಾಟಗಾರರ ಬಗ್ಗೆ ಅರಿತುಕೊಳ್ಳುವ ಮೂಲಕ ಸಮುದಾಯ ಕಟ್ಟಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಸಮುದಾಯದ ಮೇಲಿದೆ ಎಂದರು.

ಮಾಜಿ ಸಭಾಪತಿ, ಎಂಎಲ್ಸಿ ಬಸವರಾಜ ಹೊರಟ್ಟಿ ಮಾತನಾಡಿ, ಅನುಭವ ಮಂಟಪ ರಚನೆ ಮೂಲಕ ಸಂಸತ್ ವ್ಯವಸ್ಥೆಗೆ ಅಡಿಪಾಯ ಹಾಕಿಕೊಟ್ಟ ಬಸವಣ್ಣ ಅವರ ಆದರ್ಶ ಪ್ರತಿಯೊಬ್ಬರಿಗೂ ದಾರಿದೀಪವಾಗ ಬೇಕಿದೆ. ಸಮಾನತೆಗೆ ಒತ್ತು ನೀಡುವ ಮೂಲಕ ದೇಶವ್ಯಾಪಿ ಹೆಸರುವಾಸಿ ಯಾದ ಸಿದ್ಧಗಂಗಾ ಶ್ರೀಗಳಂತೆ ಪ್ರತಿಯೊಬ್ಬರೂ ಆದರ್ಶಪ್ರಾಯ ಜೀವನ ನಡೆಸುವಂತಾಗಬೇಕು. ಸಮುದಾಯದ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡುವುದು ಅತ್ಯಗತ್ಯ ಎಂದರು.

ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ, ಸಹಕಾರ ನೀಡಿದವರಿಗೆ ಗಣ್ಯರು ಸನ್ಮಾನಿಸಿ ಗೌರವಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾದ ವೀರಾಜಪೇಟೆ ತಾಲೂಕು ಅಧ್ಯಕ್ಷ ಕೆ.ಎನ್.ಸಂದೀಪ್ ಪ್ರಾಸ್ತಾವಿಕ ನುಡಿಗಳಾಡಿದರು.

ಕ್ರೀಡಾ ಸಮಿತಿ ಅಧ್ಯಕ್ಷ ಎಸ್.ಮಹೇಶ್ ಕ್ರೀಡಾಕೂಟದ ವರದಿ ವಾಚಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರುಗಳಾದ ವೀರಾಜಪೇಟೆ ಯ ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆಯ ಸದಾಶಿವ ಸ್ವಾಮೀಜಿ, ಮಹಾಂತ ಸ್ವಾಮೀಜಿ, ರುದ್ರಮಿನಿ ಸ್ವಾಮೀಜಿ, ಅಮ್ಮತ್ತಿಯ ಚನ್ನಬಸವದೇಶೀಕೇಂದ್ರ ಸ್ವಾಮೀಜಿ, ತೊರೆನೂರಿನ ಮಲ್ಲೇಶ ಸ್ವಾಮೀಜಿ, ಶನಿವಾರಸಂತೆಯ ಇಮ್ಮಡಿ ಶಿವಲಿಂಗಸ್ವಾಮೀಜಿ, ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಬೇಲೂರು ಶಾಸಕ ಕೆ.ಎಸ್. ಲಿಂಗೇಶ್, ಹಿರಿಯ ವಕೀಲ ಎಚ್.ಎಸ್.ಚಂದ್ರಮೌಳಿ, ಮಾಹಿತಿ ಹಕ್ಕು ಆಯೋಗ ಮಾಜಿ ಅಧ್ಯಕ್ಷ ಜೆ.ಎಸ್.ವಿರೂಪಾಕ್ಷಯ್ಯ, ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಸಮಿತಿ ಉಪಾಧ್ಯಕ್ಷ ಸಚ್ಚಿದಾನಂದ ಮೂರ್ತಿ, ಕಾರ್ಯದರ್ಶಿ ರೇಣುಕಾ ಪ್ರಸನ್ನ, ಪ್ರಮುಖರಾದ ಡಾ.ಬಿ.ಎಂ.ಲತಾ, ದೇವರಾಜಮ್ಮ, ಜಿಲ್ಲಾ ಘಟಕದ ಡಿ.ಬಿ.ಧರ್ಮಪ್ಪ, ಜಿಪಂ ಸದಸ್ಯೆ ಕುಮುದಾ ಧರ್ಮಪ್ಪ, ತಾಪಂ ಸದಸ್ಯ ಬಿ.ಎನ್.ಅನಂತಕುಮಾರ್, ಮಹದೇವಪ್ಪ ಮತ್ತಿತರರು ಇದ್ದರು.