ಶ್ರೀಮಂಗಲ, ಡಿ. 25: ಶ್ರೀಮಂಗಲ ನಾಡು ಕೊಡವ ಸಮಾಜ ಆಶ್ರಯದಲ್ಲಿ ಇದೇ ತಾ. 31 ರಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಸಂಜೆ ಕೊಡವ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶ್ರೀಮಂಗಲ ನಾಡು ಕೊಡವ ಸಮಾಜದ ಅಧ್ಯಕ್ಷ ಚೋನಿರ ರತನ್ ತಿಳಿಸಿದ್ದಾರೆ.
ಕೊಡವ ಸಮಾಜದ ಕಚೇರಿಯಲ್ಲಿ ಕಾರ್ಯಕ್ರಮದ ಬಗ್ಗೆ ಪೂರ್ವಸಿದ್ದತಾ ಸಭೆಯಲ್ಲಿ ಅವರು ಈ ಬಗ್ಗೆ ವಿವರಿಸಿದರು. 31 ರಂದು ಪೂರ್ವಾಹ್ನ 10 ಗಂಟೆಗೆ ಶ್ರೀಮಂಗಲದ ಕೊಡವ ಸಮಾಜದ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಎಲ್ಲರೂ ಭಾಗವಹಿಸುವ ಮುಕ್ತ ಸ್ಪರ್ಧೆಯಾಗಿ ಏರ್ಪಡಿಸಲಾಗಿದ್ದು, ಸ್ಪರ್ಧಾರ್ಥಿಗಳು .22 ಕೋವಿಯನ್ನು ಬಳಸಬೇಕು. ವಿಜೇತರಿಗೆ ಟ್ರೋಫಿ ಹಾಗೂ ಪ್ರಥಮ, ದ್ವಿತೀಯ, ತೃತೀಯ ಸ್ಥಾನಕ್ಕೆ ನಗದು ಬಹುಮಾನವನ್ನು ನೀಡಲಾಗುವುದು. ಸ್ಪರ್ಧಾರ್ಥಿಗಳಿಗೆ ಪ್ರವೇಶ ಶುಲ್ಕ ಇರುತ್ತದೆ. ಸ್ಪರ್ಧಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.
ಸಮಾಜದ ಕಾರ್ಯದರ್ಶಿ ಮಚ್ಚಮಾಡ ವಿಜಯ್ ಮಾತನಾಡಿ, ತಾ. 31 ರಂದು ಸಂಜೆ 7 ಗಂಟೆಗೆ ಪೊನ್ನಂಪೇಟೆ ಕೊಡವ ಸಮಾಜದ ವತಿಯಿಂದ ಕೊಡವ ಸಾಂಸ್ಕøತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಂದರ್ಭ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕುಮಟೂರು ಗ್ರಾಮದ ಹಾಗೂ ಪ್ರಸ್ತುತ ಸೇವೆಯಲ್ಲಿರುವ ಭಾರತೀಯ ಸೇನೆಯ ಲೆ. ಕರ್ನಲ್ ದೇಯಂಡ ಸಂಪತ್ ಪೂವಯ್ಯ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಇದಲ್ಲದೆ ರಾತ್ರಿ 9 ಗಂಟೆಗೆ ಕುಟ್ಟದ ಮುಕ್ಕಾಟಿರ ನಿಕಿಲ್ ನಾಣಯ್ಯ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮ ಹಾಗೂ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಹಾಗೂ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ವಿವರಕ್ಕೆ ದೂರವಾಣಿ ಸಂಖ್ಯೆ : 9448031310 ವiತ್ತು 9980000618 ಮೂಲಕ ಮಾಹಿತಿ ಪಡೆಯಬಹುದು. ಸಭೆಯಲ್ಲಿ ಸಮಾಜದ ನಿರ್ದೇಶಕ ಕಳ್ಳಂಗಡ ರಜತ್ ಪೂವಣ್ಣ ಹಾಜರಿದ್ದರು.