ಸೋಮವಾರಪೇಟೆ, ಡಿ. 24: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್, ಕೊಡಗು ಜಿಲ್ಲಾ ಸಮಿತಿ, ರೋಟರಿ ಸಂಸ್ಥೆ ಹಾಗೂ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ತಾ. 26 ರಂದು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿದ್ಯಾರ್ಥಿಗಳಿಗೆ ಕಂಕಣ ಸೂರ್ಯಗ್ರಹಣ ವೀಕ್ಷಣೆ ಹಾಗೂ ಖಗೋಳಯಾನ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರೋಟರಿ ಅಧ್ಯಕ್ಷ ಡಿ.ಪಿ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 8.05ರಿಂದ 11.05ರ ವರೆಗೆ ಕೌತುಕದ ಸೂರ್ಯಗ್ರಹಣವನ್ನು ಸೌರಕನ್ನಡಕದ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸುಮಾರು 500 ವಿದ್ಯಾರ್ಥಿಗಳು ವೀಕ್ಷಣೆ ಮಾಡಲಿದ್ದಾರೆ. ಸಾರ್ವಜನಿಕರು ಭಾಗವಹಿಸಬಹುದು ಎಂದು ತಿಳಿಸಿದ್ದಾರೆ.