ನಾಪೋಕ್ಲು, ಡಿ. 24: ಇಲ್ಲಿನ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಬೆಳ್ಳಿಹಬ್ಬ ತಾ. 26 ರಂದು ಜರುಗಲಿದೆ. ವಿದ್ಯಾಸಂಸ್ಥೆಯ ಆವರಣದಲ್ಲಿ ಸಂಜೆ 4.30ಕ್ಕೆ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಂತರ್ರಾಷ್ಟ್ರೀಯ ಕ್ರೀಡಾಪಟು ತೀತಿಮಾಡ ಅರ್ಜುನ್ ದೇವಯ್ಯ ಹಾಗೂ ಕೊಳಕೇರಿಯ ಕಾಫಿ ಬೆಳೆಗಾರ ಬಿದ್ದಾಟಂಡ ಜೀವನ್ ಕಾರ್ಯಪ್ಪ ಪಾಲ್ಗೊಳ್ಳಲಿರುವರು. ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ಸಿ. ಗಪ್ಪಣ್ಣ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.