ಕುಶಾಲನಗರ, ಡಿ. 25 : ಕಾವೇರಿ ನದಿ ದಂಡೆಗಳಲ್ಲಿ ಪ್ರವಾಸಿಗರಿಂದ ಬಯಲು ಶೌಚ ಪ್ರಕರಣಗಳು ಅಧಿಕವಾಗಿ ಕಂಡುಬರುತ್ತಿರುವ ಹಿನ್ನಲೆಯಲ್ಲಿ ತನ್ನ ಅನುದಾನದ ಮೂಲಕ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಭರವಸೆ ನೀಡಿದ್ದಾರೆ.

ರಾಜ್ಯದ ಎಲ್ಲೆಡೆಗಳಿಂದ ಆಗಮಿಸುವ ಪ್ರವಾಸಿಗರು, ವಿದ್ಯಾರ್ಥಿಗಳು ಜಿಲ್ಲೆಯ ಗಡಿಭಾಗದ ನದಿ ತಟಗಳಲ್ಲಿ ಬಯಲು ಶೌಚ ಮಾಡುತ್ತಿರುವ ಬಗ್ಗೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರು ಶಾಸಕರಿಗೆ ಸಮಸ್ಯೆ ನಿರ್ಮೂಲನೆಗೆ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಮನವಿ ಮಾಡಿದ ಸಂದರ್ಭ ಪ್ರಾರಂಭದಲ್ಲಿ ಕುಶಾಲನಗರ ಪ.ಪಂ. ವ್ಯಾಪ್ತಿಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ನೂತನ ಸಮುದಾಯ ಶೌಚಾಲಯ ನಿರ್ಮಾಣಕ್ಕೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.