ಸೋಮವಾರಪೇಟೆ, ಡಿ. 26: ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಕ್ಕಲಿಗ ಗೌಡ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಡಿ.ಎಸ್.ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು.
ಶಾಲೆಯ ಪಕ್ಕದಲ್ಲಿರುವ ಜಾಗದಲ್ಲಿ ಸಂಘದ ಕಟ್ಟಡವನ್ನು ಪ್ರಸಕ್ತ ವರ್ಷವೇ ನಿರ್ಮಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಜನಾಂಗ ಬಾಂಧವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಬಹುಮಾನ ವಿತರಣಾ ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷ ವಿ.ಕೆ.ಶಂಭುಗೌಡ, ಐಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಂ.ರಮೇಶ್, ಸದಸ್ಯೆ ಸಬಿತಾ ಚನ್ನಕೇಶವ, ಆರ್.ಎಂ.ಸಿ. ಸದಸ್ಯ ಡಿ.ಎಸ್.ಪೊನ್ನಪ್ಪ, ಸಂಘದ ಕಾರ್ಯದರ್ಶಿ ಎಂ.ಎಲ್. ರಾಜೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.