ಮಡಿಕೇರಿ, ಡಿ. 26: ನೆಹರು ಯುವ ಕೇಂದ್ರ ಮಡಿಕೇರಿ, ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ, ತಾಲೂಕು ಯುವ ಒಕ್ಕೂಟ, ಜಿಲ್ಲಾ ಆಸ್ಪತ್ರೆ ಹಾಗೂ ಸ್ವಾಗತ ಯುವಕ ಸಂಘ ಮೇಕೇರಿಯ ಸಂಯುಕ್ತ ಆಶ್ರಯದಲ್ಲಿ 8ನೇ ವರ್ಷದ ಗ್ರಾಮೀಣ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮೇಕೇರಿಯ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಅವರ ಸಾಧನೆಯನ್ನು ಗೌರವಿಸುವ ಸಲುವಾಗಿ ಪ್ರತೀ ವರ್ಷ ತಾ. 25 ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜನೆಗೊಳ್ಳುತ್ತಿದೆ.
ಕಾರ್ಯಕ್ರಮವನ್ನು ಮಡಿಕೇರಿ ಡಿವೈಎಸ್ಪಿ ಬಿ.ಪಿ. ದಿನೇಶ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಪೆÇಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡುವ ನಿಟ್ಟಿನಲ್ಲಿ ಇಲಾಖೆ ಪ್ರಯತ್ನ ಮಾಡುತ್ತಿದ್ದು, ಜನಸಾಮಾನ್ಯರಲ್ಲಿರುವ ಭಯ ಮತ್ತು ಆತಂಕ ದೂರ ಮಾಡಲು ಈ ಯೋಜನೆ ಜಾರಿಯಲ್ಲಿದೆ ಎಂದರು. ಸಂವಿಧಾನದ ಕುರಿತು ಮಾತನಾಡಿದ ಸಂಪನ್ಮೂಲ ವ್ಯಕ್ತಿ ಪಿ.ಎಂ. ದಾಮೋದರ್, ಸಂವಿಧಾನ ಅಂಗೀಕಾರಗೊಂಡ ದಿನವಾಗಿ ನವೆಂಬರ್ 26 ರಂದು ಸಂವಿಧಾನ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದರು. ಮಡಿಕೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಡಾ. ಕರುಂಬಯ್ಯ ಮಾತನಾಡಿ, ಒಬ್ಬ ವ್ಯಕ್ತಿ ಒಂದು ಬಾರಿ ಕೊಡುವ ರಕ್ತ ಕೇವಲ 35 ದಿನಗಳ ವರೆಗೆ ಮಾತ್ರ ಶೇಖರಿ ಸಿಡುವ ಸಾಮಥ್ರ್ಯ ಹೊಂದಿರುತ್ತದೆ. ಆದ್ದರಿಂದ ಇಂತಹ ಸ್ವಯಂಪ್ರೇರಿತ ರಕ್ತದಾನ ಶಿಬಿರಗಳು ಹೆಚ್ಚು ಆಯೋಜ ನೆಗೊಂಡು ರಕ್ತದ ಅವ್ಯಶಕತೆಗಳನ್ನು ಪೂರೈಸಲು ಸಹಕರಿಸಬೇಕಾಗಿ ಕೋರಿದರು. ಕಾರ್ಮಿಕ ಅಧಿಕಾರಿ ಎಂ.ಎಂ. ಯತ್ನಿಟ್ಟಾ ಮಾತನಾಡಿ, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪಿಂಚಣಿ ಯೋಜನೆ ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ನೂತನ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಪಿ.ಎಂ. ಸುಕುಮಾರ್ ಮಾತನಾಡಿದರು.
ಸ್ವಾಗತ ಯುವಕ ಸಂಘದ ಅಧ್ಯಕ್ಷ ಹರೀಶ್‍ಕುಮಾರ್, ತಾಲೂಕು ಪಂಚಾಯಿತಿ ಸದಸ್ಯೆ ಕುಮುದಾ ರಶ್ಮಿ, ಮೇಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಉಪಾಧ್ಯಕ್ಷ ಭೀಮಯ್ಯ, ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ, ಮೇಕೇರಿ ಗ್ರಾಮ ಪಂಚಾಯಿತಿ ಸದಸ್ಯರು, ಯುವಕ ಸಂಘಗಳ ಪದಾಧಿಕಾರಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು. 50ಕ್ಕೂ ಹೆಚ್ಚು ಮಂದಿ ಮಹಿಳೆಯರಾದಿಯಾಗಿ ರಕ್ತದಾನ ಮಾಡುವ ಮೂಲಕ ಗಮನಸೆಳೆದರು.