ಮಡಿಕೇರಿ, ಡಿ. 26: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವು ಬೋಯಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿದೆ. ತಾ. 20ರಂದು ಶಿಬಿರದ ಉದ್ಘಾಟನೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಎಂ.ಪಿ. ಅಪ್ಪಚ್ಚುರಂಜನ್ ನೆರವೇರಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಅವರು ಈ ವೇಳೆ ನುಡಿದರು.
ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಸರಸ್ವತಿ ರವಿಕುಮಾರ್, ಸುಂದರಿ, ಎಸ್.ಎಸ್. ಶಿವಕುಮಾರ್, ಹೆಚ್.ಎ. ಆನಂದ್, ಕಾಫಿ ಬೆಳೆಗಾರ ಅಪ್ಪಯ್ಯ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಿ.ಜೆ. ಜವರಪ್ಪ ವಹಿಸಿದ್ದರು.
ವಿದ್ಯಾರ್ಥಿ ಪ್ರತಿನಿಧಿ ಹರ್ಷಿತಾ ಸ್ವಾಗತಿಸಿ, ಶಿಬಿರಾಧಿಕಾರಿ ನಿರ್ಮಲಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೀರ್ತನಾ ವಂದಿಸಿದರು.