ಶ್ರೀಮಂಗಲ, ಡಿ. 26: ಹುದಿಕೇರಿಯ ಲಿಟಲ್ ಪ್ಲವರ್ ಹೆಚ್‍ಪಿಇಜಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ತಾ. 28 ರಂದು ನಡೆಯಲಿದೆ.
ಅಪರಾಹ್ನ 1.30 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪೊನ್ನಂಪೇಟೆ ರಾಮಕೃಷ್ಣಾಶ್ರಮದ ಅಧ್ಯಕ್ಷ ಶ್ರೀ ಬೋಧಸ್ವರೂಪಾನಂದ ಸ್ವಾಮೀಜಿ, ಅಂತರರಾಷ್ಟ್ರೀಯ ಅಥ್ಲೀಟ್ ತೀತಮಾಡ ಅರ್ಜುನ್ ದೇವಯ್ಯ, ವೀರಾಜಪೇಟೆ ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್, ಹುದಿಕೇರಿ ಗ್ರಾ.ಪಂ. ಅಧ್ಯಕ್ಷೆ ಕಳ್ಳೇಂಗಡ ಸುಧಾ ರಮೇಶ್, ಕೊಡವ ತಕ್ಕ್ ಎಳ್ತ್‍ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.