ಮಡಿಕೇರಿ, ಡಿ. 27 : ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಮಕ್ಕಂದೂರು, ಕೆ.ನಿಡುಗಣೆ ಮತ್ತು ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು ರೂ. 14.55 ಕೋಟಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಜಿ.ಪಂ.ಸದಸ್ಯೆ ಯಾಲದಾಳು ಪದ್ಮಾವತಿ, ಗಾಳಿಬೀಡು ಗ್ರಾ.ಪಂ.ಅಧ್ಯಕ್ಷ ಸುಭಾಷ್ ಸೋಮಯ್ಯ, ಪ್ರಮುಖ ನಾಪಂಡ ರವಿ ಕಾಳಪ್ಪ, ಲೋಕೋಪಯೋಗಿ ಇಲಾಖೆ ಎಇಇ ಶಿವರಾಮ್, ಜಿ.ಪಂ. ಎಇಇ ಶ್ರೀಕಂಠಯ್ಯ ಇತರರು ಇದ್ದರು.