ಕೂಡಿಗೆ, ಡಿ. 27: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕುಶಾಲನಗರ ತಾಲೂಕು ಘಟಕ ಹಾಗೂ ಸ್ಥಳೀಯ ಸಾಂಸ್ಕøತಿಕ ಘಟಕ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಕೂಡಿಗೆಯ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸುಲೋಚನಾ ಮತ್ತು ಡಾ. ಎಂ.ಜಿ. ನಾಗರಾಜ್ ದತ್ತಿ ಸಮಾರಂಭವು ನಡೆಯಿತು.
ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್‍ಸಾಗರ್ ವಹಿಸಿದ್ದರು. ಕಾರ್ಯಕ್ರಮವನ್ನು ಕೂಡಿಗೆ ಶಿಕ್ಷಕರ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ ಕೆ.ವಿ. ಸುರೇಶ್ ಉದ್ಘಾಟಿಸಿದರು. ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಬಿ.ಆರ್. ಶಶಿಧರ್ ಭಟ್ ಭಾಷೆ, ಸಾಹಿತ್ಯ, ಕಲೆ ಇತಿಹಾಸ, ಜಾನಪದ, ಶಾಸನ, ಪರಿಸರ, ಸಂಸ್ಕøತಿ, ಮಠಗಳು ಹಾಗೂ ಪತ್ರಿಕೋದ್ಯಮ ಕುರಿತು ಉಪನ್ಯಾಸ ನೀಡಿದರು.
ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ಎಂ. ಮಹಲಿಂಗಯ್ಯ, ಶಿಕ್ಷಕರ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ ಶಿವಕುಮಾರ್, ಜಿಲ್ಲಾ ಕಸಾಪ ನಿರ್ದೇಶಕ ಕೆ.ಕೆ. ನಾಗರಾಜ ಶೆಟ್ಟಿ, ಉಪನ್ಯಾಸಕ ಸಿದ್ದೇಶ್ ಸೇರಿದಂತೆ ಕಸಾಪ ಪದಾಧಿಕಾರಿಗಳು ಇದ್ದರು.
ಕಾರ್ಯಕ್ರಮವನ್ನು ಪ್ರಶಿಕ್ಷಣಾರ್ಥಿ ಸುಲೋಚನ ತಂಡ ನಿರ್ವಹಿಸಿದರು.