ಕೂಡಿಗೆ, ಡಿ. 27: ಹೆಬ್ಬಾಲೆ ಗ್ರಾ.ಪಂ ವ್ಯಾಪ್ತಿಯ ಹೆಬ್ಬಾಲೆ ಗ್ರಾಮದಲ್ಲಿ ಗ್ರಾಮಕ್ಕೊಂದು ಪಾರ್ಕ್ ಎಂಬ ಸರ್ಕಾರದ ಹೊಸ ನೀತಿಯನ್ವಯ ರಾಷ್ಟ್ರೀಯ ಉದ್ಯೋಗಖಾತ್ರಿ ಯೋಜನೆಯಡಿ ರೂ. ಮೂರು ಲಕ್ಷ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಇದರಿಂದ ಆಯಾ ಗ್ರಾ.ಪಂ ವ್ಯಾಪ್ತಿಯಲ್ಲಿ ಉದ್ಯಾನವನ ನಿರ್ಮಾಣಗೊಳ್ಳಲಿದ್ದು, ವಯೋವೃದ್ಧರು, ಮಕ್ಕಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಪಾರ್ಕ್ ನಿರ್ಮಾಣ ಮಾಡುವುದರ ಜೊತೆಗೆ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಆವರಣದಲ್ಲಿ ಒಂದು ಹೊಸ ಪಾರ್ಕ್ ನಿರ್ಮಾಣ ಕಾರ್ಯವನ್ನು ಕೈಗೊಳ್ಳುವ ಯೋಜನೆ ಇದೆ ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಕೇಶ್ ತಿಳಿಸಿದ್ದಾರೆ.