ಶನಿವಾರಸಂತೆ, ಡಿ. 27: ಕೃಷಿಕರ ಬೆಳೆ ನಾಶಕ್ಕೆ ಕಾರಣ, ಲಾಭ-ನಷ್ಟ, ಉತ್ಪಾದನೆ ಬಗ್ಗೆ ಮಾಹಿತಿ ನೀಡಲು ಕೃಷಿ ಅಭಿಯಾನ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಮ್ಮ ಅಭಿಪ್ರಾಯಪಟ್ಟರು.

ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಕೃಷಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಹಭಾಗಿತ್ವದಲ್ಲಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ನಡೆದ ಕೃಷಿ ಅಭಿಯಾನ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಡಾ. ಹೆಚ್.ಎಸ್. ರಾಜಶೇಖರ್ ಪ್ರಾಸ್ತಾವಿಕ ನುಡಿಯಾಡಿದರು. ವಸ್ತು ಪ್ರದರ್ಶನ ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಜೆ. ದೀಪಕ್, ಸದಸ್ಯ ಸಿ.ಪಿ. ಪುಟ್ಟರಾಜ್, ತಾಲೂಕು ಕೃಷಿ ಸಮಾಜ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ ಮಾತನಾಡಿದರು.

ವಿಜ್ಞಾನಿಗಳೊಂದಿಗೆ ನಡೆದ ರೈತ ಸಂವಾದ ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಕೆ.ವಿ.ಕೆ.ಯ. ಸಸ್ಯರೋಗ ತಜ್ಞ ಡಾ. ವೀರೇಂದ್ರಕುಮಾರ್, ಚೆಟ್ಟಳ್ಳಿ ಕಾಫಿ ಸಂಶೋಧನಾ ಕೇಂದ್ರದ ಉಪನಿರ್ದೇಶಕ ಡಾ. ಶಿವಪ್ರಸಾದ್ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತರಿಸಿದರು. ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಹೆಚ್. ಮಹಮ್ಮದ್ ಗೌಸ್ ಮಾತನಾಡಿದರು. ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಡಾ. ಎಸ್. ಮುಕುಂದ್, ಸಿಬ್ಬಂದಿ ತಾಲೂಕು ಪಂಚಾಯಿತಿ ಸದಸ್ಯೆ ಲೀಲಾವತಿ, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್, ಲಯನ್ಸ್ ಕ್ಲಬ್ ಎನ್.ಬಿ. ನಾಗಪ್ಪ, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಬಿ.ಕೆ. ಚಿನ್ನಪ್ಪ ಇತರರು ಉಪಸ್ಥಿತರಿದ್ದರು.