ಮಡಿಕೇರಿ, ಡಿ. 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ 2019-20ನೇ ಸಾಲಿನ ಐಇಸಿ ಯೋಜನೆಯಡಿ ಜಿಲ್ಲಾ ಮಟ್ಟದ ಆಯುಷ್ ವಿಚಾರ ಸಂಕಿರಣ (ಟಿಎಸ್‍ಪಿ) ಕಾರ್ಯಕ್ರಮವು ಡಿಸೆಂಬರ್, 31 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಆಯುಷ್ ಕಚೇರಿಯ ಸೆಮಿನಾರ್ ಹಾಲ್‍ನಲ್ಲಿ ನಡೆಯಲಿದೆ.

ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ, ಸಂಸದ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಬೆಂಗಳೂರು ಆಯುಷ್ ನಿರ್ದೇಶನಾಲಯದ ಆಯುಕ್ತೆ ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಣ್ಣೆಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ, ಜಿಲ್ಲಾ ಆಯುಷ್ ಅಧಿಕಾರಿ ಬಿ.ಹೆಚ್. ರಾಮಚಂದ್ರ ಇತರರು ಪಾಲ್ಗೊಳ್ಳಲಿದ್ದಾರೆ.