ಮಡಿಕೇರಿ, ಡಿ.28: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಭಾರತ ರಾಷ್ಟ್ರೀಯ ಕಾಂಗ್ರೆಸ್ನ 135ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಕಾಂಗ್ರೆಸ್ ಪಕ್ಷ ಸಮಾನತೆಯ ಆಧಾರದಲ್ಲಿ ಈ ದೇಶದ ಜನರನ್ನು ಒಗ್ಗೂಡಿಸಿದರೆ ಭಾರತೀಯ ಜನತಾ ಪಕ್ಷವು ಅದಕ್ಕೆ ತದ್ವಿರುದ್ಧವಾಗಿ ಧರ್ಮದ ಆಧಾರದಲ್ಲಿ ದೇಶದ ಜನರನ್ನು ಒಡೆಯುತ್ತಿರುವುದು ದುರದೃಷ್ಟಕರ ಎಂದರು. ಕೆಪಿಸಿಸಿ ಮುಖಂಡ ಟಿ.ಪಿ.ರಮೇಶ್ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ಪ್ರಥಮ ಅಧ್ಯಕ್ಷರಾದ ಡಬ್ಲ್ಯು ಸಿ. ಬ್ಯಾನರ್ಜಿ ಅವರಿಂದ ಇಂದಿನ ಅಧ್ಯಕ್ಷರಾದ ಸೋನಿಯ ಗಾಂಧಿವರೆಗೆ ಕಾಂಗ್ರೆಸ್ ಅಧ್ಯಕ್ಷರುಗಳು ದೇಶಕ್ಕೆ ನೀಡಿದ ಕೊಡುಗೆ ಅಪಾರವೆಂದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬೇಕಲ್ ರಮಾನಾಥ್ ಪ್ರಸ್ತುತ ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.
ಹೊಸೂರು ಸೂರಜ್ ಸ್ವಾಗತಿಸಿ, ತೆನ್ನಿರ ಮೈನಾ ಕಾರ್ಯಕ್ರಮ ನಿರೂಪಿಸಿದರು. ನೆರವಂಡ ಉಮೇಶ್ ಪ್ರತಿಜ್ಞಾ ವಿಧಿ ಬೋಧಿಸಿ, ಅಬ್ದುಲ್ ರಜಾಕ್ ವಂದಿಸಿದರು. ಇತ್ತೀಚಿಗೆ ನಿಧಾನರಾದ ಕಾಂಗ್ರೆಸ್ ಮುಖಂಡರಾದ ಅಶೋಕ್ ಚೆಟ್ಟಿಯಪ್ಪ, ಕೆ.ಎಂ.ಗಣಪತಿ ಹಾಗೂ ಸಿಎಎ ಪ್ರತಿಭಟನೆಯಲ್ಲಿ ಮರಣ ಹೊಂದಿದವರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.