ಸೋಮವಾರಪೇಟೆ, ಡಿ.28: ಬೆಂಗಳೂರು ವೈಯಾಲಿಕಾವಲ್‍ನಲ್ಲಿರುವ ಸಿಪಿಐ ಕಚೇರಿಗೆ ಬೆಂಕಿಯಿಟ್ಟಿರುವ ಘಟನೆ ಖಂಡನೀಯ. ಕೂಡಲೆ ಆರೋಪಿಗಳನ್ನು ಬಂಧಿಸುವಂತೆ ಎಐಟಿಯುಸಿ ಜಿಲ್ಲಾಧ್ಯಕ್ಷ ಎಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ.

ರಾಜಕೀಯ ದುರದ್ದೇಶದಿಂದ ಕಿಡಿಗೇಡಿಗಳು ಈ ಕೃತ್ಯವನ್ನು ಎಸಗಿದ್ದು, ಇದರ ಹಿಂದೆ ವಿರೋಧಿಗಳ ಕೈವಾಡವಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಕೂಡಲೆ ಆರೋಪಿಗಳನ್ನು ಬಂಧಿಸಬೇಕು. ತಪ್ಪಿದ್ದಲ್ಲಿ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವದು ಎಂದು ಸೋಮಪ್ಪ ಎಚ್ಚರಿಸಿದರು.