ಮಡಿಕೇರಿ, ಡಿ. 28: ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ ಜನವರಿ 3 ರಿಂದ 5 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸಂಘಟಿಸಲಾಗುತ್ತಿದ್ದು, ಕೊಡಗು ಜಿಲ್ಲಾಮಟ್ಟದ ಯುವ ಜನೋತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಾಳುಗಳು ಜನವರಿ 3 ರಿಂದ 5 ರವರೆಗೆ ನಡೆಯುವ ರಾಜ್ಯಮಟ್ಟದ ಯುವ ಜನೋತ್ಸವದಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ.