ವೀರಾಜಪೇಟೆ, ಡಿ. 30: ವಿದ್ಯಾರ್ಥಿ ಜೀವನ ಅತ್ಯಮೂಲ್ಯ ವಾದದ್ದು, ಎನ್.ಎಸ್.ಎಸ್. ಶಿಬಿರದಲ್ಲಿ ಕಲಿತಿರುವ ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ತಮ್ಮ ಜೀವನದಲ್ಲಿಯೂ ಅಳವಡಿಸಿಕೊಳ್ಳು ವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು.
ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2019-20ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಹೇಶ್ ಗಣಪತಿ ಅವರು ಶಿಬಿರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿ, ವಿದ್ಯಾರ್ಥಿಗಳು ಎನ್.ಎಸ್.ಎಸ್. ಶಿಬಿರದಲ್ಲಿ ಕಲಿತ ಶಿಸ್ತು ಮತ್ತು ಸಮಯ ಪಾಲನೆ ಅತೀ ಮುಖ್ಯ ವಾದದ್ದು. ಉತ್ತಮ ವಿಚಾರಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳ ಬೇಕು ಎಂದರು. ಅತಿಥಿಯಾಗಿ ಭಾವಹಿಸಿದ್ದ ಹೆಗ್ಗಳ ಗ್ರಾಮದ ಸೈಂಟ್ ಜ್ಯೂಡ್ ಕ್ಯಾಥೋಲಿಕ್ ಚರ್ಚ್‍ನ ಫಾದರ್ ರೋಷನ್ ಜೋಸೆಫ್ ಮಾತನಾಡಿ, ವಿದ್ಯಾರ್ಥಿಗಳ ಹವ್ಯಾಸ ಗಳು ಅವರ ಮುಂದಿನ ಬದುಕನ್ನು ನಿರ್ಧರಿಸುತ್ತದೆ ಎಂದರು. ಬೇಟೋಳಿ ಗ್ರಾ.ಪಂ. ಅಧ್ಯಕ್ಷೆ ಬಿ.ಬಿ. ಚೋಂದಮ್ಮ ಮಾತನಾಡಿ, ನಮ್ಮ ಗ್ರಾಮದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. ಶಿಬಿರಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು. ಗ್ರಾ,ಪಂ. ಉಪಾಧ್ಯಕ್ಷ ಎ.ಎ. ವಸಂತ ಕಟ್ಟಿ, ಅಯ್ಯಪ್ಪ ದೇವಾಲಯದ ಅಧ್ಯಕ್ಷ ವಿಜಯನ್ ಮಾತನಾಡಿದರು. ಸ.ಪ್ರ.ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ರಾಖಿ ಪೂವಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪಾಠ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಮೂಲಕ ಕಾಲೇಜಿಗೆ ಕೀರ್ತಿತರು ವಂತಾಗಬೇಕು ಎಂದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮಶೇಖರ್ ಮತ್ತು ಶಶಿಕಾಂತ್ ಶಾಲಾ ಮುಖ್ಯ ಶಿಕ್ಷಕರಾದ ಸುನೀತ ಮತ್ತು ಲತಾ, ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಹೆಚ್.ಎಸ್. ವೇಣು ಗೋಪಾಲ್, ಎಂ.ಎ. ಸುನೀತ, ಶಿಬಿರದ ಯೋಜನಾಧಿಕಾರಿಗಳಾದ ಆರ್. ರಘುರಾಜು, ಎಂ.ಬಿ. ದಿವ್ಯಾ ಉಪಸ್ಥಿತರಿದ್ದರು.